Ad Widget

ಕುಕ್ಕೆ: ಮಾ.12ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ – ಅರ್ಜಿ ಆಹ್ವಾನ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.12ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ತಮ್ಮ ಅರ್ಜಿಯನ್ನು ಶ್ರೀ ದೇವಳಕ್ಕೆ ಸಲ್ಲಿಸಬಹುದು. 08257-281224,236200,281700, 281265 ಕರೆ ಮಾಡಿ ಹೆಚ್ಚಿನ ಮಾಹಿತಿಪಡೆದುಕೊಳ್ಳಬಹುದು.
ಅಥವಾ ಶ್ರೀ ದೇವಳದ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.
ವೃಷಭ ಲಗ್ನ ಸುಮೂಹುರ್ತ:
ಮಾ.12ರಂದು ಬೆಳಗ್ಗೆ 11.30 ರಿಂದ 12.00ರ ವರೆಗೆ ನೆರವೇರುವ ವೃಷಭ ಲಗ್ನ ಸುಮೂಹುರ್ತದಲ್ಲಿ ವಿವಾಹ ನೆರವೇರಲಿದೆ.ಫೆ.15 ವಧು-ವರರು ನಿಗದಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ
ದಿನಾಂಕವಾಗಿದೆ.ಫೆ.೨೦ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು.ಫೆ.28 ಅಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾದರೆ, ಮಾ.3ರಂದು ವಧುವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.
ಅಗತ್ಯ ದಾಖಲೆಗಳು:
ವಧು-ವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರ ಪ್ರತಿ, ಪಾಸ್‌ಪೋರ್ಟ್ ಸೈಜ್‌ನ 2 ಪೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧು-ವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯತ್‌ನಿಂದ ಅಥವಾ ಸಂಬಂಧಪಟ್ಟ ಸರಕಾರಿ ಇಲಾಖಾಧಿಕಾರಿಗಳಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಸಹಾಯಹಸ್ತ:
ಸರಳ ಸಾಮೂಹಿಕ ವಿವಾಹವಾಗುವ ವರನಿಗೆ ಹೂವಿನ ಹಾರ, ಪಂಚೆ, ಶರ್ಟ್, ಶಲ್ಯ, ಪೇಟ, ಬಾಸಿಂಗ್ ಇತ್ಯಾದಿಗಳಿಗಾಗಿ ಶ್ರೀ ದೇವಳದಿಂದ ಪ್ರೋತ್ಸಾಹ ಧನವಾಗಿ ರೂ.೫ ಸಾವಿರ ಹಾಗೂ ವಧುವಿಗೆ ಹೂವಿನ ಹಾರ, ಧಾರೆ ಸೀರೆ, ರವಿಕೆ ಕಣ, ಕಾಲುಂಗುರ ಇತ್ಯಾದಿಗಳಿಗೆ ರೂ.10 ಸಾವಿರ ನೀಡಲಾಗುವುದು. ಸುಮಾರು ರೂ 40 ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ನೀಡಲಾಗುವುದು. ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಆವಶ್ಯಕ ವ್ಯವಸ್ಥೆಗಳನ್ನು ದೇವಳದಿಂದ ಮಾಡಲಾಗುವುದು. ಸರಳ ಸಾಮೂಹಿಕ ವಿವಾಹವಾಗುವ ವಧುವಿಗೆ ಕಂದಾಯ ಇಲಾಖೆಯ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ ರೂ.10 ಸಾವಿರ ನಿಶ್ಚಿತ ಠೇವಣಿ ಸೌಲಭ್ಯವನ್ನು ಒದಗಿಸಲಾಗುವುದು. ವಿವಾಹವಾಗುವ ಪರಿಶಿಷ್ಠ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರಳ ವಿವಾಹ ಯೋಜನೆಯಡಿ ರೂ.50 ಸಾವಿರಗಳನ್ನು ಒದಗಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading