ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ಜನವರಿ 13ರಂದು ನಡೆಯಿತು. ಕೆವಿಜಿ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ರೇವತಿ ಪಿಎಂ ಇವರು ಪೋಸ್ಕೋ ಕಾಯ್ದೆಯ ಬಗ್ಗೆ ಮಾತನಾಡಿದರು ಮತ್ತು ಕುಮಾರಿ ವೃಂದ ಪ್ರಕಾಶ್ ರವರು ಬಾಲ ಕಾರ್ಮಿಕ ಕಾಯ್ದೆಯ ಬಗ್ಗೆ ಮಾತನಾಡಿದರು. ಕಾನೂನು ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಜಯರಾಮ್ ರವರು ಉಪಸ್ಥಿತರಿದ್ದರು. ಶ್ರೀ ಶಾರದ ಪದವಿ ಪೂರ್ವ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ದಯಾಮಣಿ ಕೆ ಇವರು ಶುಭ ಹಾರೈಸಿದರು. ಉಪನ್ಯಾಸಕರಾದ ಶ್ರೀ ಪ್ರಸನ್ನ ಎನ್ ಹೆಚ್ ಮತ್ತು ಶ್ರೀ ಬಾಲಕೃಷ್ಣ. ಕೆ ಇವರು ಸಹಕರಿಸಿದರು. ಪಿಯುಸಿ ವಿಭಾಗದ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು
- Saturday
- November 23rd, 2024