ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿ ಪೋಷಕರ ಸಭೆ ಇಂದು ನಡೆಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ರವರು ಅಧ್ಯಕ್ಷತೆ ವಹಿಸಿ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರವನ್ನು ವಿವರಿಸಿ ಅತ್ಯುತ್ತಮ ಸಲಹೆ ಸೂಚನೆಗಳನ್ನು ನೀಡಿದರು. ಪ್ರಾಂಶುಪಾಲೆ ಶ್ರೀಮತಿ ದಯಾಮಣಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಶ್ರೀಮತಿ ಸ್ವರ್ಣ ಕಲಾ.ಎ. ಎಸ್ ಸ್ವಾಗತಿಸಿ ಉಪನ್ಯಾಸಕ ದಾಮೋದರ ಎನ್ ರವರು ವಂದಿಸಿದರು. ಉಪನ್ಯಾಸಕ ಪ್ರಸನ್ನ ಎನ್ ಹೆಚ್ ರವರು ಕಾರ್ಯಕ್ರಮ ನಿರೂಪಿಸಿದರು.
- Thursday
- November 21st, 2024