Ad Widget

ಜ.26-ಜ.29: ಅಯ್ಯನಕಟ್ಟೆ ಜಾತ್ರೋತ್ಸವ; ಉಪಸಮಿತಿಗಳ ಸಂಚಾಲಕರು, ಉಪ ಸಂಚಾಲಕರು ಹಾಗೂ ಭಕ್ತರ ಸಭೆ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕದಲ್ಲಿ ಜ.26ರಿಂದ ಜ.29ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಜಾತ್ರೋತ್ಸವ ಉಪಸಮಿತಿಗಳ ಸಂಚಾಲಕರು, ಉಪ ಸಂಚಾಲಕರು ಹಾಗೂ ಭಕ್ತರ ಸಭೆಯು ಇಂದು(ಜ.17) ನಡೆಯಿತು. ಸಭೆಯಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಮನೆ ಮನೆಗೆ ತಲುಪಿಸುವ ಅಭಿಯಾನ ನಡೆಸುವ ಸಲುವಾಗಿ ವಿವಿಧ ತಂಡಗಳನ್ನು ರಚಿಸಲಾಯಿತು. ಸಭೆಯಲ್ಲಿ ಆಮಂತ್ರಣ ಪತ್ರಿಕೆಯನ್ನು ಜ.19 ಗುರುವಾರದಿಂದ ವಿತರಣೆ ಮಾಡುವುದಾಗಿ ತೀರ್ಮಾನಿಸಲಾಯಿತು.

. . . . . . . . .

ಸಭೆಯಲ್ಲಿ ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಗೌರವಾಧ್ಯಕ್ಷ ರಾಂ ಪ್ರಸಾದ್ ಕಾಂಚೋಡು, ಕಾರ್ಯಾಧ್ಯಕ್ಷ ಅನಂತಕೃಷ್ಣ ತಂಟೆಪ್ಪಾಡಿ, ಕಾರ್ಯದರ್ಶಿ ಪ್ರಶಾಂತ್ ಕಿಲಂಗೋಡಿ, ಜೊತೆ ಕಾರ್ಯದರ್ಶಿ ಟಿ.ವಾಸುದೇವ ಆಚಾರ್ಯ, ಸಹ ಕೋಶಾಧಿಕಾರಿ ಬಿ.ಕುಶಾಲಪ್ಪ ಗೌಡ ಮಣಿಮಜಲು ಹಾಗೂ ಜಾತ್ರೋತ್ಸವ ಉಪಸಮಿತಿಗಳ ಸಂಚಾಲಕರು, ಉಪ ಸಂಚಾಲಕರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading