Ad Widget

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ; ಶ್ರೀ ದೇವರ ಬಲಿ ಉತ್ಸವ,ದೀಪೋತ್ಸವ, ವಸಂತ ಕಟ್ಟೆ ಪೂಜೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.18ರಂದು ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ದೀಪೋತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು.

. . . . . .

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಪಾವಂಜೆ ಮೇಳದವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು.

ಜ.19 ರಂದು ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ಸವಾರಿ ಹೋಗಿ ಬಂದು ಬೆಡಿಕಟ್ಟೆಯಲ್ಲಿ ಸಿಡಿಮದ್ದು ಪ್ರದರ್ಶನ ನಡೆಯಲಿದೆ. ರಾತ್ರಿ ಗಂಟೆ 10.30ಕ್ಕೆ ಮಹಾಪೂಜೆ ನಂತರ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಉತ್ಸವ, ಶಯನೋತ್ಸವ, ಕವಾಟ ಬಂಧನ, ಅನ್ನಸಂತರ್ಪಣೆ ನಡೆಯಲಿದೆ. ಜ.20ರಂದು ಬೆಳಗ್ಗೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12.00ಕ್ಕೆ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಶ್ರೀ ದೇವರ ಬಲಿಹೊರಟು ಕಟ್ಟೆಪೂಜೆ, ಅವಭೃತ ಸ್ನಾನ ಆಗಿ ದೇವಸ್ಥಾನಕ್ಕೆ ಬಂದು ಧ್ವಜಾವರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ನಂತರ ಉಳ್ಳಾಕುಲು, ಮೈಷಂತಾಯ ದೈವದ ಭಂಡಾರ ತೆಗೆಯುವುದು. ಜ.21 ರಂದು ಬೆಳಿಗ್ಗೆ ಗಂಟೆ 7.00ಕ್ಕೆ ಮಹಾಗಣಪತಿ ಹೋಮ, ಪಂಚವಿಂಶತಿ ಕಲಶ ಪೂಜೆ, ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ ನಡೆಯಲಿದೆ. ನಂತರ ಪ್ರಸಾದ ವಿತರಣೆ ಪಿಲಿಭೂತದ ಭಂಡಾರ ತೆಗೆಯುವುದು, ಮಧ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ, ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಮಹಾಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ಗಂಟೆ 3.00ರಿಂದ ಪಿಲಿಭೂತದ ನೇಮೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಶ್ರೀ ಕಲ್ಲುರ್ಟಿ ದೈವದ ನೇಮ ಬಳಿಕ ಪ್ರಸಾದ ವಿತರಣೆ ನಡೆಯಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!