Ad Widget

ಹರಿಹರ ಪಲ್ಲತ್ತಡ್ಕ : ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸರಕಾರಿ ಪ್ರೌಢಶಾಲೆ ಹರಿಹರ ಪಲ್ಲತ್ತಡ್ಕ ಇವುಗಳ ಸಹಭಾಗಿತ್ವದಲ್ಲಿ ಹರಿಹರ ಪಲ್ಲತ್ತಡ್ಕ ಪ್ರೌಢಶಾಲೆಯಲ್ಲಿ ಜ.19 ಮತ್ತು 20 ರಂದು 2 ದಿನಗಳ ಕಾಲ ಹರಿಹರ ಪಲ್ಲತ್ತಡ್ಕ ಕ್ಲಸ್ಟರ್ ನ 2022-23ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮ ನಡೆಯಿತು.
ಜ.19 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹರಿಹರ ಪಲ್ಲತ್ತಡ್ಕ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಲವ ಮಲ್ಲಾರ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಜ.19 ರಂದು ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ, ಶಿಕ್ಷಣ ಸಂಯೋಜಕರಾದ ನಳಿನಿ, ಹರಿಹರ ಪಲ್ಲತ್ತಡ್ಕ ಕ್ಲಸ್ಟರ್ ಸಿ.ಆರ್.ಪಿ ಸುದೀರ್.ಕೆ, ಶಾಲಾ ಮುಖ್ಯ ಶಿಕ್ಷಕರಾದ ರಾಮಚಂದ್ರ ಕಜ್ಜೋಡಿ ಇವರುಗಳು ಉಪಸ್ಥಿತರಿದ್ದರು.
ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶೀತಲ್ ಇವರು ಕಾರ್ಯಕ್ರಮಕ್ಕೆ ಆಗಮಿಸಿ ಮಾರ್ಗದರ್ಶನ ನೀಡಿದರು.
ಕಲಿಕಾ ಚೇತರಿಕೆ ವರ್ಷದಲ್ಲಿ ಕಲಿಕೆಯನ್ನು ಸಂತಸದಾಯಕಗೊಳಿಸುವುದರೊಂದಿಗೆ ವಿದ್ಯಾರ್ಥಿಗಳನ್ನು ವಿಜ್ಞಾನ, ಕಲೆ, ಹಾಡು, ಕ್ರಾಫ್ಟ್, ಪರಿಸರ ಅನ್ವೇಷಣೆ, ಸಂದರ್ಶನ ಮುಂತಾದ ಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಈ ಕಲಿಕಾ ಹಬ್ಬವು ಪ್ರಯೋಜನಕಾರಿಯಾಗಿದ್ದು, 2 ದಿನಗಳ ಕಾಲ ನಡೆದ ಈ ಕಲಿಕಾ ಹಬ್ಬದಲ್ಲಿ ಹರಿಹರ ಪಲ್ಲತ್ತಡ್ಕ ಕ್ಲಸ್ಟರ್ ನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.
ಜ.20 ರಂದು ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ರಾಮಚಂದ್ರ ಕಜ್ಜೋಡಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಶಿಕ್ಷಕರಾದ ತಾರಾಮತಿ.ಎಂ, ಸಿ.ಆರ್.ಪಿ ಸುದೀರ್.ಕೆ ಹಾಗೂ ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಿಕ್ಷಕರಾದ ಶರಣಪ್ಪ ದೋಣಿ ಸ್ವಾಗತಿಸಿ, ಶಿಕ್ಷಕರಾದ ಅರವಿಂದ್.ಕೆ ಧನ್ಯವಾದ ಸಮರ್ಪಿಸಿದರು. ಶಿಕ್ಷಕರಾದ ಸುಭಾಷ್ ಕಾರ್ಯಕ್ರಮ ನಿರೂಪಿಸಿದರು.
(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading