Ad Widget

ಸುಳ್ಯ : ಬಿಜೆಪಿ ವತಿಯಿಂದ ಜ. 21 ರಿಂದ 29 ರವರೆಗೆ ವಿಜಯ ಸಂಕಲ್ಪ ಅಭಿಯಾನ

ಮುಂಬರುವ ವಿಧಾನಸಭಾ ಚುನಾವಣೆಗೆ ವ್ಯವಸ್ಥಿತವಾಗಿ ತಯಾರಿ ಪ್ರಯುಕ್ತ ಸುಳ್ಯ ಕ್ಷೇತ್ರದಾದ್ಯಂತ ಈಗಾಗಲೆ ಬೂತ್ ವಿಜಯ ಅಭಿಯಾನ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಮುಂದಿನ ಹಂತವಾಗಿ ಕ್ಷೇತ್ರದಾದ್ಯಂತ ಜನವರಿ 21 ರಿಂದ 29 ರವರೆಗೆ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮ ನಡೆಯಲಿದೆ‌. ಅಭಿಯಾನದಲ್ಲಿ ವಿವಿಧ ಸ್ತರದ ಜವಾಬ್ದಾರಿಯ ಪ್ರಮುಖರು, ಕಾರ್ಯಕರ್ತರು ಕ್ಷೇತ್ರದ 231 ಬೂತ್ ಗಳ ಎಲ್ಲಾ ಮನೆಗಳ ಸಂಪರ್ಕ, ಪ್ರತೀ ಮನೆಗೆ ಸರಕಾರದ ಸಾಧನೆಗಳ ಕರಪತ್ರ ಮತ್ತು ಸ್ಟಿಕ್ಕರ್ ವಿತರಣೆ, 8000090009 ಸಂಖ್ಯೆಗೆ ಮಿಸ್ ಕಾಲ್ ಕೊಡುವ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಸಲಾಗುವುದು. ಈ ಸಂದರ್ಭದಲ್ಲಿ ಸರ್ಕಾರದ ಯೋಜನೆಯ ಫಲಾನುಭವಿಗಳ ಸಂಪರ್ಕ, ಪ್ರತೀ ಬೂತ್ ವ್ಯಾಪ್ತಿಯಲ್ಲಿ 10 ಗೋಡೆ ಬರಹಗಳನ್ನು ಮಾಡುವುದು.
ಜನವರಿ 29 ಆದಿತ್ಯವಾರ ಬೂತ್ ಮಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಸೇರಿ ಪ್ರದಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಆಲಿಸುವ ಕಾರ್ಯಕ್ರಮ ಸೇರಿದಂತೆ ಅನೇಕ ಸಂಘಟನಾತ್ಮಕ ಕಾರ್ಯಗಳನ್ನು ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಜ 21 ರಂದು ಸುಳ್ಯ ಬಿಜೆಪಿ ಕಛೇರಿಯ ಬಳಿ ಸಚಿವರಾದ ಎಸ್ ಅಂಗಾರ ಅವರು ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸುಳ್ಯ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading