ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಸುಳ್ಳ ನಗರ ಪಂಚಾಯತ್ ಮಾಜಿ ಸದಸ್ಯ ಕೆಎಂ ಮುಸ್ತಫ ನೇಮಕ ಗೊಂಡಿರುತ್ತಾರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಜಬ್ಬಾರ್ ಖಾನ್ ರವರು ಎಐಸಿಸಿ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರು ಸಂಸದರೂ ಆದ ಇಮ್ರಾನ್ ಪ್ರತಾಪ್ ಗಡಿ ಇವರ ಅನುಮೋದನೆಯೊಂದಿಗೆ ನೇಮಕಾತಿ ಆದೇಶ ಹೊರಡಿಸಿರುತ್ತಾರೆ ಈ ನೇಮಕಾತಿಗೆ ಕರ್ನಾಟಕ ವಿಧಾನಸಭೆ ವಿಪಕ್ಷ ಶಾಸಕಾಂಗ ಉಪ ನಾಯಕ ಯು ಟಿ ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಧಾನಪರಿಷತ್ ಶಾಸಕ ಹರೀಶ್ ಕುಮಾರ್,ಮಾಜಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ ‘ಸೋಜಾ,ಮಾಜಿ ಸಚಿವರಾದ ಬಿ ರಮಾನಾಥ ರೈ,ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ್ ಶಿಫಾರಸು ಮಾಡಿರುತ್ತಾರೆ, ಜಿಲ್ಲಾ ಯೋಜನಾ ಸಮಿತಿ ಮಾಜಿ ಸದಸ್ಯರಾಗಿದ್ದು ಪ್ರಕೃತ ದ. ಕ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷರಾಗಿ ಸುಳ್ಯ ಗಾಂಧಿನಗರ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷರಾಗಿ, ಇಂಡಿಯನ್ ರೆಡ್ ಕ್ರಾಸ್ ಸುಳ್ಯ ತಾಲೂಕು ಘಟಕದ ಉಪ ಸಭಾಪತಿ ಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
- Friday
- November 1st, 2024