ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಗುತ್ತಿಗಾರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ ಗುತ್ತಿಗಾರು ಕ್ಲಸ್ಟರ್ ನ ಕಲಿಕಾ ಹಬ್ಬ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜ.23 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ನಡೆಯಿತು.
ಜ.23 ಮತ್ತು 24 ರಂದು ಎರಡು ದಿನಗಳ ಕಾಲ ನಡೆಯುವ ಈ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಗುತ್ತಿಗಾರು ಕ್ಲಸ್ಟರ್ ನ 14 ಶಾಲೆಯ 120 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.
ಕಲಿಕಾ ಚೇತರಿಕೆ ವರ್ಷದಲ್ಲಿ ಕಲಿಕೆಯನ್ನು ಸಂತಸದಾಯಕಗೊಳಿಸುವುದರೊಂದಿಗೆ ವಿದ್ಯಾರ್ಥಿಗಳನ್ನು ವಿಜ್ಞಾನ, ಕಲೆ, ಹಾಡು, ಕ್ರಾಫ್ಟ್, ಪರಿಸರ ಅನ್ವೇಷಣೆ, ಸಂದರ್ಶನ ಮುಂತಾದ ಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಈ ಕಲಿಕಾ ಹಬ್ಬ ಕಾರ್ಯಕ್ರಮವು ಪ್ರಯೋಜನಕಾರಿಯಾಗಿದೆ.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಸದಸ್ಯರಾದ ಮಾಯಿಲಪ್ಪ ಕೊಂಬೊಟ್ಟು ಇವರು ವಹಿಸಿದ್ದರು.
ಮುಖ್ಯ ಶಿಕ್ಷಕರಾದ ನೆಲ್ಸನ್ ಕ್ಯಾಸ್ಟಲಿನೊ ಇವರು ಸ್ವಾಗತಿಸಿದರು. ಗುತ್ತಿಗಾರು ಕ್ಲಸ್ಟರ್ ಸಿ.ಆರ್.ಪಿ ಸಂತೋಷ್ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವೇದಿಕೆಯಲ್ಲಿ ತಾಲೂಕು ಶಿಕ್ಷಣ ಸಂಯೋಜಕರಾದ ಶ್ರೀಮತಿ ನಳಿನಿ ಇವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಸ.ಮಾ.ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಉಮಾವತಿ.ಎನ್ ಹಾಗೂ ಎಲ್ಲಾ ಸಂಪನ್ಮೂಲ ವ್ಯಕ್ತಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಜ್ಞಾನ ಶಿಕ್ಷಕರಾದ ಶ್ರೀಮತಿ ಕವಿತಾ ಇವರು ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಕರಾದ ಗೋಪಾಲ್ ಏನೆಕಲ್ ಇವರು ಧನ್ಯವಾದ ಸಮರ್ಪಿಸಿದರು.
(ವರದಿ : ಉಲ್ಲಾಸ್ ಕಜ್ಜೋಡಿ)
- Thursday
- November 21st, 2024