ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ “ಗಣರಾಜ್ಯೋತ್ಸವ” ವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಚಂದ್ರಶೇಖರ ಪಾರೆಪ್ಪಾಡಿ ಇವರು ಸರ್ವರನ್ನು ಸ್ವಾಗತಿಸಿ ತಮ್ಮ ಪ್ರಾಸ್ತಾವಿಕ ನುಡಿಗಳೊಂದಿಗೆ ಭಾರತದಲ್ಲಿ ಸಾರ್ವಭೌಮ ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಚಯ, ಸಂವಿಧಾನ ಜಾರಿ ಮತ್ತು ಅದರ ಮಹತ್ವ ಇವುಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಧ್ವಜಾರೋಹಣ ನೆರವೇರಿಸಿ, ಇದೊಂದು ಆಕರ್ಷಕ ಕಾರ್ಯಕ್ರಮ ಭಾರತ ಸಂವಿಧಾನದ ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ನಾವು ಅರಿತಿರಬೇಕೆಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಕರಾದ ಕುಶಾಲಪ್ಪ ತುಂಬತ್ತಾಜೆ ಇವರು ಭಾರತದ ರಾಜಧಾನಿ ದೆಹಲಿಯಲ್ಲಿ ಯಾವ ರೀತಿ ಈ ದಿನ ಕಾರ್ಯಕ್ರಮಗಳು ನಡೆಯುತ್ತವೆ. ಅಲ್ಲಿ ವಿವಿಧ ಕಾರ್ಯಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆಂದರು.
ನಂತರ ಶಾಲಾ ವಿದ್ಯಾರ್ಥಿಗಳಿಂದ ಭಾಷಣ , ದೇಶಭಕ್ತಿ ಗೀತೆ ಹಾಗೂ ವಿವಿಧ ಸಾಂಸ್ಕೃತಿಯ ಕಾರ್ಯಕ್ರಮಗಳು ಜರಗಿದವು. ಕೊನೆಗೆ ಶಿಕ್ಷಕಿ ಸುಧಾರಣಿಯವರು ಸರ್ವರಿಗೂ ವಂದನೆಗಳನ್ನು ಸಲ್ಲಿಸಿದರು. ಶ್ರೀಮತಿ ಮೋಕ್ಷ ಇವರು ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು,ಊರ ವಿದ್ಯಾ ಅಭಿಮಾನಿಗಳು ಉಪಸ್ಥಿತರಿದ್ದರು. ಕೊನೆಗೆ ಸರ್ವರಿಗೂ ಸಿಹಿ ತಿಂಡಿ ಹಂಚಲಾಯಿತು.