ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ (26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ
ಮಲ್ಲಿಕಾರವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ಇಂದು ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆನ್ನಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸುವ ಸಲುವಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದು ಬಂದಿದೆ.
- Friday
- November 1st, 2024