ಐವರ್ನಾಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚೈತ್ರಾ ಕಟ್ಟತ್ತಾರುರವರ ಅಧ್ಯಕ್ಷತೆಯಲ್ಲಿ ಜೂ.20 ರಂದು ನಡೆಯಿತು.
ಆಡಳಿತ ಮಂಡಳಿಯ ಅವಧಿಯ ಕೊನೆಯ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಲಾಯಿತು.
ಮತ್ತು 5 ವರ್ಷಗಳ ಅವಧಿಯಲ್ಲಿ ಪಂಚಾಯತ್ ನ ವಿವಿಧ ಕಾಮಗಾರಿಗಳು ಮತ್ತು ಸಹಕಾರ ನೀಡಿದವರಿಗೆ ಕೃತಜ್ಞತೆ ಸಲ್ಲಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಚೈತ್ರಾ ಕಟ್ಟತ್ತಾರು ರವರು ಮಾತನಾಡಿ ತಮ್ಮ ಅಧ್ಯಕ್ಷತೆಯ ಅವಧಿಯ ದಿನಗಳನ್ನು ನೆನಪಿಸಿಕೊಂಡು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿಯವರು ಮಾತನಾಡಿ ಗ್ರಾಮಕ್ಕೆ ಅನುದಾನಗಳನ್ನು ಒದಗಿಸಿದ ತಾಲೂಕು ಪಂಚಾಯತ್ ,ಜಿಲ್ಲಾ ಪಂಚಾಯತ್ ಸದಸ್ಯರಿಗೆ ,ಇಲಾಖಾಧಿಕಾರಿಗಳಿಗೆ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಉಪಸ್ಥಿತರಿದ್ದು ಮಾತನಾಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಸ್ವಾಗತಿಸಿ,ವಂದಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರಾಜೀವಿ ಪರ್ಲಿಕಜೆ,ನವೀನ್ ಸಾರಕರೆ,ಚಂದ್ರಲಿಂಗಂ ಎ.ಎಸ್,ತಿರುಮಲೇಶ್ವರ ಪೂಜಾರಿಮನೆ,ಶಾಂತಾರಾಮ ಕಣಿಲೆಗುಂಡಿ,ಶ್ರೀಮತಿ ರಾಜೀವಿ ಲಾವಂತಡ್ಕ,ಶ್ರೀಮತಿ ರೇಖಾ ಉದ್ದಂಪಾಡಿ,ಶ್ರೀಮತಿ ಸುಜಾತ ಪವಿತ್ರಮಜಲು,ಎಸ್.ಎನ್.ದೇವಿಪ್ರಸಾದ್ ಕೊಪ್ಪತ್ತಡ್ಕ,ಕೋಗಿಲವಾಣಿ,ಶ್ರೀಮತಿ ಭವಾನಿ ಬಾಂಜಿಕೋಡಿ ಉಪಸ್ಥಿತರಿದ್ದರು.
ಪಂಚಾಯತ್ ಸಿಬ್ಬಂದಿ ವರ್ಗ ದವರು ಸಹಕರಿಸಿದರು.