ಇಂದು ಮೂರನೇ ಅಂತಾರಾಷ್ಟ್ರೀಯ ಯೋಗ ದಿನವಾಗಿದೆ . ಯೋಗವು ಭಾರತೀಯ ಮೂಲದ , 6000 ಕ್ಕಿಂತಲೂ ಹಳೆಯದಾದ , ಭೌತಿಕ , ಮಾನಸಿಕ ಮತ್ತು ಆಧ್ಯಾತ್ಮಕ ಅಭ್ಯಾಸವಾಗಿದೆ ಬೆಳೆದು ಬಂದಿದೆ.
ಜೂ .21 ರಂದು ವಿಶ್ವ ಯೋಗ ದಿನಾಚರಣೆಯನ್ನು ಭಾರತ ಸೇರಿದಂತೆ 177 ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ . ಇದು ಭಾರತದ ಕೊಡುಗೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದು . ಇಂದು ನಮ್ಮ ದೇಶದ ಮೂಲೆಮೂಲೆಗಳಲ್ಲಿ ಯೋಗದಿನವನ್ನು ಆಚರಿಸಲಾಗುತ್ತಿದೆ. ಯೋಗದ ಇತಿಹಾಸ ಕ್ರಿ.ಪೂ 3 ನೇ ಶತಮಾನದಲ್ಲಿದ್ದ ಪತಂಜಲಿ ಋಷಿಯ ಚಿಂತನೆಯ ಫಲವಾದ ಯೋಗ ಬರೀ ಶಾಸ್ತ್ರವಾಗದೆ , ಆಚರಣೆ , ಅಭ್ಯಾಸವಾಗಿ ಇಲ್ಲಿ ತನಕ ಬೆಳೆದು ಬಂದಿದೆ . ಪ್ರತಿ ವ್ಯಕ್ತಿಯ ದೈಹಿಕ , ಮಾನಸಿಕ , ಭಾವನಾತ್ಮಕ , ಆಧ್ಯಾತ್ಮಿಕ ಉನ್ನತಿಗೆ ಯೋಗ ಸಹಕಾರಿಯಾಗಿದೆ .
ಯೋಗದ ಮಹತ್ವ – ಯೋಗ ವ್ಯಾಯಾಮ ಮಾತ್ರವಲ್ಲದೆ ನಿಮ್ಮೊಂದಿಗೆ , ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ . ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹವಾಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ . ಯೋಗವು ಮನಸ್ಸು ಮತ್ತು ದೇಹ ; ಚಿಂತನೆ ಮತ್ತು ಕ್ರಿಯೆ ; ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ . ಹಾಗೆಯೇ ಪ್ರಕೃತಿ ಮತ್ತು ಮನುಷ್ಯ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ . ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆಯಾಗಿದೆ .
ಯೋಗ ದಿನಾಚರಣೆಯ ಇತಿಹಾಸ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕರಡು ಪ್ರಸ್ತಾವನೆಯನ್ನು 2014 ಡಿಸೆಂಬರ್ ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತ ಮಂಡಿಸಿತ್ತು . ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು , ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದವು . ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ನೀಡಿದ್ದವು .
- Wednesday
- November 27th, 2024