
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು, ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ರಿ.) ಸುಬ್ರಹ್ಮಣ್ಯ, ನಿಸರ್ಗ ಯುವಕ ಮಂಡಲ ಐನೆಕಿದು ಇವುಗಳ ಸಹಯೋಗದೊಂದಿಗೆ ಜ.30 ರಂದು ಸುಬ್ರಹ್ಮಣ್ಯದ ಕುಮಾರಧಾರ ಸಭಾಂಗಣದಲ್ಲಿ ತೋಟಗಾರಿಕಾ ಬೆಳೆಗಳ ಕೊಯ್ಲೋತ್ತರ ನಿರ್ವಹಣೆ ಮತ್ತು ಸಂಸ್ಕರಣೆ ಹಾಗೂ ತರಕಾರಿ ಕೈತೋಟ ಕೃಷಿ ಮಾಹಿತಿ ಕಾರ್ಯಗಾರ ನಡೆಯಿತು.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ನ ಉಪಾಧ್ಯಕ್ಷರಾದ ಶ್ರೀಮತಿ ವಿನಯ ರಾನಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ನ ನಿರ್ದೇಶಕರು ಹಾಗೂ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು, ಸುಬ್ರಹ್ಮಣ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ದ.ಕ ಜಿಲ್ಲಾ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್ ನ ನಿರ್ದೇಶಕರಾದ ಶ್ರೀಮತಿ ಶೋಭಾ ನಲ್ಲೂರಾಯ, ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರು ಹಾಗೂ ಲ್ಯಾಂಪ್ಸ್ ಸುಳ್ಯ ನಿರ್ದೇಶಕರಾದ ಮಾಧವ.ಡಿ ಇವರುಗಳು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ನ ವ್ಯವಸ್ಥಾಪಕ ನಿರ್ದೇಶಕರಾದ ಪ್ರವೀಣ್.ಕೆ, ಸುಳ್ಯ ತೋಟಗಾರಿಕಾ ಅಧಿಕಾರಿ ಶ್ರೀಮತಿ ಮಧುಶ್ರೀ ಇವರುಗಳು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಹಾಪ್ ಕಾಮ್ಸ್ ಮಂಗಳೂರು ನಿರ್ದೇಶಕರಾದ ಯಶೋಧರ ಶೆಟ್ಟಿ.ಬಿ ಬಂಟ್ವಾಳ, ಬಾಲಕೃಷ್ಣ ಪಕ್ಕಳ ಬೆಳ್ತಂಗಡಿ, ನಿಸರ್ಗ ಯುವಕ ಮಂಡಲ(ರಿ.) ಐನೆಕಿದು ಇದರ ಅಧ್ಯಕ್ಷರಾದ ಭುಕ್ಷಿತ್ ನಿರ್ಪಾಡಿ, ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್.ಕೆ.ಎಸ್ ಇವರುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮ ಮುಗಿದ ನಂತರ ರೈತರ ತೋಟಕ್ಕೆ ತೆರಳಿ ಉತ್ಪನ್ನಗಳನ್ನು(ತೆಂಗಿನಕಾಯಿ) ಖರೀದಿಸಲಾಯಿತು.
ಈ ಸಂದರ್ಭದಲ್ಲಿ ಶೇಕಡಾ 50 ರ ಸಹಾಯಧನದಲ್ಲಿ 100 ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು 3 ತಳ್ಳುಗಾಡಿಗಳನ್ನು ರೈತ ಸದಸ್ಯರುಗಳಿಗೆ ವಿತರಣೆ ಮಾಡಲಾಯಿತು.