ಕೊರೋನಾ ಮಹಾಮಾರಿ ವೈರಸ್ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ನಿಂದ ಮುಂದೂಡಿಕೆ ಯಾಗಿದ್ದ ಎಸೆಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆಂಧ್ರಪ್ರದೇಶ ಸರಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.ಕೊರೋನಾ ಭಯದಿಂದ ಕಳೆದ ಮಾರ್ಚ್ ನಲ್ಲಿ ನಡೆಯಬೇಕಿದ್ದ ಹತ್ತನೇ ತರಗತಿ ಪರೀಕ್ಷೆಯನ್ನು ಎಲ್ಲ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದವು. ತಮಿಳುನಾಡು ತೆಲಂಗಾಣ ರಾಜ್ಯ ಸರ್ಕಾರವು ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಗೊಳಿಸುವಂತೆ ಆದೇಶ ಹೊರಡಿಸಿತ್ತು. ಇದೀಗ ಅದೇ ಸಾಲಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಸೇರಿ ಕೊಂಡಿದೆ. ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ , ಶಿಕ್ಷಣ ಸಚಿವ ಅದಿಮುಲಾಪು ರೆಡ್ಡಿ ಈ ಸಂಬಂಧ ಸ್ಪಷ್ಟೀಕರಣ ನೀಡಿ ರಾಜ್ಯ ಮತ್ತು ದೇಶದಲ್ಲಿ ಕರೋನವೈರಸ್ ನಿಯಂತ್ರಣಕ್ಕೆ ಬಾರದೆ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣ ಗೊಳಿಸಲಾಗಿದೆ ಎಂದು ತಿಳಿಸಿದ್ದಾರೆಂದು ತಿಳಿದುಬಂದಿದೆ.
- Friday
- November 22nd, 2024