ಖಾಸಗಿ ಆಸ್ಪತ್ರೆಯಲ್ಲಿ ಕೂಡ ಕೊರೊನ ಸೋಂಕಿತರಿಗೆ ಚಿಕಿತ್ಸೆಗೆ ನೀಡುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.ಆಯುಷ್ಮಾನ್ ಕಾರ್ಡ್ ಇದ್ದವರಿಗೆ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಉಚಿತ ಚಿಕಿತ್ಸೆ ಸಿಗಲಿದೆ. ಅದರ ವೆಚ್ಚವನ್ನು ಸರಕಾರ ಭರಿಸುವುದೆಂದೂ ವರದಿಯಾಗಿದೆ. ಆದರೇ ಇದರ ದುರುಪಯೋಗ ಆಗದಂತೆ ಸರಕಾರ ನಿಗವಹಿಸಬೇಕಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಭರ್ತಿ ಆಗಿದ್ದರೆ ಮಾತ್ರ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡುತ್ತಾರೆ ಎಂದು ತಿಳಿದುಬಂದಿದೆ.ರಾಜ್ಯದಲ್ಲಿ ಸುಮಾರು 483 ಖಾಸಗಿ ಆಸ್ಪತ್ರೆ ಗಳನ್ನು ಇದಕ್ಕಾಗಿ ಗುರುತಿಸಲಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ COVID-19 ಪ್ರಕರಣಗಳು ವರದಿಯಾಗುತ್ತಿರುವುದರಿಂದ, ರೋಗಿಗಳ ಚಿಕಿತ್ಸೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ಒಳಗೊಳ್ಳಲು ಈಗ ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ನೀಡಿದೆ. ಚಿಕಿತ್ಸೆ ನೀಡಲು ಅವಕಾಶವಿರುವ ಖಾಸಗಿ ಆಸ್ಪತ್ರೆಗಳ ಪಟ್ಟಿಯಲ್ಲಿ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕೂಡ ಸೇರಿದೆ.
- Friday
- November 22nd, 2024