Ad Widget

ಶ್ರದ್ಧಾ-ಭಕ್ತಿಯ ಕಾಂಚೋಡು ಜಾತ್ರೋತ್ಸವ ಸಂಪನ್ನ

ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11ರಂದು ಆರಂಭಗೊಂಡು, ಫೆ.14ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಫೆ.11ರಂದು ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಸಂಜೆ ದೇವಾಲಯಕ್ಕೆ ತಂತ್ರಿಗಳವರ ಆಗಮನ, ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ಶ್ರೀ ದೇವಳಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆ, ತದನಂತರ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ವತಿಯಿಂದ ಹಸಿರು ಹೊರೆ ಕಾಣಿಕೆ ಸಮರ್ಪಣೆಯಾಗಿ ದೇವಾಲಯದಲ್ಲಿ ಬಿಂಬಶುದ್ಧಿ, ವಾಸ್ತುಪೂಜೆ, ವಾಸ್ತು ರಕ್ಷೋಘ್ನ ಹೋಮ ನಡೆಯಿತು. ಫೆ.12ರಂದು ಬೆಳಗ್ಗೆ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ, ಮಹಿಳೆಯರಿಂದ ಕುಂಕುಮಾರ್ಚನೆ ನಡೆದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ತಾಯಂಬಕಂ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ, ಶ್ರೀ ಮಂಜುನಾಥೇಶ್ವರ ಸ್ವಾಮಿ ಹಾಗೂ ಅಮ್ಮನವರ ಬಲಿ ಉತ್ಸವ ನಡೆದು ಶ್ರೀ ದೇವರ ಗಂಧಪ್ರಸಾದ ವಿತರಣೆಯಾಯಿತು. ಫೆ.13ರಂದು ಬೆಳಗ್ಗೆ ಗಣಪತಿ ಹವನ, ಬೆಳಗಿನ ಪೂಜೆ, ಬೆಳಗ್ಗೆ ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಶ್ರೀ ದೇವರ ಗಂಧಪ್ರಸಾದ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ, ಕನ್ಯಾಕುಮಾರಿ ದೈವಗಳ ಭಂಡಾರ ತೆಗೆಯಲಾಯಿತು. ರಾತ್ರಿ ಪೂಜೆ, ಪ್ರಸಾದ ಭೋಜನದ ನಂತರ ರಾತ್ರಿ ಅಣ್ಣಪ್ಪ ಮಾಡದಲ್ಲಿ ಧರ್ಮದೈವಗಳ ನೇಮ, ಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ಫೆ.14ರಂದು ಬೆಳಗ್ಗೆ ದೇವಳದಲ್ಲಿ ಬೆಳಗ್ಗಿನ ಪೂಜೆ ಬಳಿಕ ಕಾಯಾರ ಕಲ್ಲೇರಿತ್ತಾಯ ಮಾಡದಲ್ಲಿ ಕಲ್ಲೇರಿತ್ತಾಯ ದೈವದ ನೇಮೋತ್ಸವ, ಪ್ರಸಾದ ವಿತರಣೆ, ಶ್ರೀ ದೇವಳದಿಂದ ಅನ್ನಸಂತರ್ಪಣೆ ನಡೆಯಿತು. ಬೆಳಗ್ಗೆ ಶ್ರೀ ದೇವಳದಲ್ಲಿ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಅಣ್ಣಪ್ಪ ಸ್ವಾಮಿ, ಪಂಜುರ್ಲಿ, ಗುಳಿಗ ದೈವಗಳ ಭಂಡಾರ ತೆಗೆಯುವುದು, ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಿತು. ಬಳಿಕ ಅಣ್ಣಪ್ಪ ಸ್ವಾಮಿ ಮಾಡದಲ್ಲಿ ಅಣ್ಣಪ್ಪ ಸ್ವಾಮಿ, ಪಂಜುರ್ಲಿ ದೈವಗಳ ನೇಮ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು. ಬೆಳಗಿನ ಜಾವ ದೇವಾಲಯದ ವಠಾರದಲ್ಲಿ ಶ್ರೀ ಅಗ್ನಿಗುಳಿಗ ದೈವದ ನೇಮ, ಕಾಣಿಕೆ, ಪ್ರಸಾದ ವಿತರಣೆ, ಬಲಿ ನಡೆಯುವುದರೊಂದಿಗೆ ಜಾತ್ರೋತ್ಸವ ಸಂಪನ್ನಗೊಂಡಿತು.

. . . . . . . . .


. . . . . . .

ಜಾತ್ರೋತ್ಸವದ ಅಂಗವಾಗಿ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು, ಕುಣಿತ ಭಜನೆ, ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಸಾಧಕರಿಗೆ ಗೌರವಾರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಧರ್ಮದರ್ಶಿಗಳಾದ ಪರಮೇಶ್ವರಯ್ಯ ಕಾಂಚೋಡು, ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಧರ್ಮದರ್ಶಿಗಳಾದ ಯಸ್‌.ಬಿ.ದಳ, ಧರ್ಮದರ್ಶಿಗಳಾದ ಪರಶುರಾಮ ಕಾಯಾರ ದೊಡ್ಡಮನೆ, ಆಡಳಿತ ಮಂಡಳಿ ಉಪಾಧ್ಯಕ್ಷರಾದ ಜೆ.ನಾರಾಯಣ ಭಟ್, ಅರ್ಚಕರಾದ ಕೆ.ಎಸ್. ಗೋವಿಂದ ಭಟ್, ಸಹಾಯಕ ಅರ್ಚಕರಾದ ಮೋಹನ ಗುಂಡಿಹಿತ್ಲು, ಜಾತ್ರೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಅಶೋಕ್ ಶೆಟ್ಟಿ ‘ಅರ್ಚನಾ’, ಅಧ್ಯಕ್ಷರಾದ ಗಂಗಾಧರ ಮುಪ್ಪೇರ್ಯ, ಪ್ರ. ಕಾರ್ಯದರ್ಶಿ ಯಂ.ಶಂಕರನಾರಾಯಣ ಭಟ್, ಕೋಶಾಧಿಕಾರಿ
ಲೋಕೇಶ್ ಬೆಳ್ಳಿಗೆ, ಸಂಚಾಲಕರಾದ ರಾಮಪ್ರಸಾದ್ ಕಾಂಚೋಡು, ಉಪಾಧ್ಯಕ್ಷರಾದ ವಸಂತ ಕಾಯಾರ, ಕಾರ್ಯದರ್ಶಿ
ರಾಧಾಕೃಷ್ಣ ಕೊಳೆಂಜಿಕೋಡಿ, ಜೊತೆ ಕೋಶಾಧಿಕಾರಿ ದಿನೇಶ್ ರೈ ದೇರಂಪಾಲು, ಜೊತೆ ಕಾರ್ಯದರ್ಶಿ
ಹೇಮಲತಾ ಕಾಯಾರ ಸೇರಿದಂತೆ ವಿವಿಧ ಸಮಿತಿಗಳ ಸಂಚಾಲಕರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading