ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ಸುಳ್ಯ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಮಂಗಳೂರು, ಡಾ.ಪಿ ದಯಾನಂದ ಪೈ ಮತ್ತು ಡಾ. ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ & ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.) ರೋಟರಿ ಕ್ಲಬ್ ಸುಬ್ರಹ್ಮಣ್ಯ & ಕುಕ್ಕೇಶ್ರೀ ಜೇಸಿಸ್ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ, ಒಡಿಯೂರು ಗ್ರಾಮ ವಿಕಾಸ ಯೋಜನೆ ಸುಬ್ರಹ್ಮಣ್ಯ & ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಸುಬ್ರಹ್ಮಣ್ಯ, ಯಶಸ್ವಿ ನಾಗರಿಕ ಸೇವಾ ಸಂಘ ಕಾರ್ಕಳ(ರಿ.) ಉಡುಪಿ ಜಿಲ್ಲೆ, ಕುಕ್ಕೇಶ್ರೀ ಆಟೋ ಚಾಲಕ ಮಾಲಕರ & ಕುಕ್ಕೇಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘ(ರಿ.) ಸುಬ್ರಹ್ಮಣ್ಯ ಇವರುಗಳ ಸಹಯೋಗದೊಂದಿಗೆ ಫೆ.26 ರಂದು ಬೆಳಿಗ್ಗೆ 9:30 ರಿಂದ ಮದ್ಯಾಹ್ನ 1:00 ರವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಇಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದ್ದು, ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ತ್ರಿಮೂರ್ತಿ ಅವರು ಶಿಬಿರದ ಉದ್ಘಾಟನೆ ಮಾಡಲಿದ್ದು, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಲ.ಪ್ರೋ.ರಂಗಯ್ಯ ಶೆಟ್ಟಿಗಾರ್ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
(ವರದಿ : ಉಲ್ಲಾಸ್ ಕಜ್ಜೋಡಿ)
- Thursday
- January 30th, 2025