ಸುಳ್ಯ ನಗರ ಪಂಚಾಯತ್‌ನ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಮತಿ ಕಿಶೋರಿ ಶೇಟ್ ಆಯ್ಕೆಯಾಗಿದ್ದಾರೆ. ಫೆ.28ರಂದು ನಡೆದ ಸ್ಥಾಯಿ ಸಮಿತಿ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ಅಧ್ಯಕ್ಷತೆಗೆ ಕಿಶೋರ್ ಶೇಟ್ ಅವರ ಹೆಸರು ಮಾತ್ರ ಸೂಚಿಲ್ಪಟ್ಟಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್., ಸ್ಥಾಯಿ ಸಮಿತಿ ಸದಸ್ಯರುಗಳಾದ ಸುಧಾಕರ್ ಕುರುಂಜಿಭಾಗ್, ಬಾಲಕೃಷ್ಣ ಭಟ್ ಕೊಡೆಂಕೇರಿ, ಶೀಲಾ ಕುರುಂಜಿ, ಪೂಜಿತಾ ಕೆ.ಯು., ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ರಾಧಾಕೃಷ್ಣ ರೈ ಬೂಡು, ಮೊದಲಾದವರು ಉಪಸ್ಥಿತರಿದ್ದರು.
- Wednesday
- December 4th, 2024