ಕೊಡಗಿನ ಪೆರಾಜೆ ಗ್ರಾಮದ ಕುಂಬಳಚೇರಿ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ನೀಲೇಶ್ವರ ಕ್ಷೇತ್ರದ ಬ್ರಹ್ಮಶ್ರೀ ವೇ.ಮೂ. ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಉಪನ್ಯಾಸ ನೀಡುತ್ತಾ ಭರತವ?ದ ೬೪ ಕ್ಷೇತ್ರ ಕಲೆಗಳು ಸಂಯೋಜನೆಗೊಂಡಾಗ ಮಾತ್ರ ಇಂತಹ ದೇವತಾ ಕಾರ್ಯಗಳು ಪರಿಪೂರ್ಣವಾಗಲು ಸಾಧ್ಯ. ಭಾರತೀಯ ಸಂಸ್ಕೃತಿಯಲ್ಲಿ ಬಹಳಷ್ಟು ಶಾಸ್ತ್ರ, ಸಂಪ್ರದಾಯಗಳಿವೆ. ಭಗವಂತನ ವಿರಾಟ ಸ್ವರೂಪವನ್ನು ಕಂಡುಹಿಡಿಯಲು ಯಾರಿಂದಲೂ ಸಾಧ್ಯವಾಗಿಲ್ಲ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೈವಂಕಟ್ಟು ಮಹೋತ್ಸವ ಸಮಿತಿಯ ಅಧ್ಯಕ್ಷ ಹೊನ್ನಪ್ಪ ಕೊಳಂಗಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಬಾಲಚಂದ್ರ, ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ , ಶ್ರೀ ವಯನಾಟ್ ಕುಲವನ್ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಪದ್ಮಯ್ಯ ಕುಂಬಳಚೇರಿ, ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ದೇವತಕ್ಕರಾದ ರಾಜಗೋಪಾಲ ರಾಮಕಜೆ, ಕುತ್ತಿಕೋಲು ಭಗವತಿ ಕ್ಷೇತ್ರದ ಅಧ್ಯಕ್ಷ ಕುಂuಟಿಜeಜಿiಟಿeಜಕಣ್ಣ ಬೇಡಗಂ, ಶ್ರೀ ಭಗವತಿ ತಂಬೂರಾಟಿ ಕ್ಷೇತ್ರದ ಸ್ಥಾನಿಕರಾದ ಸತ್ಯನ್ ಕಾರ್ನೋಚ್ಚನ್, ದೈವಂಕಟ್ಟು ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪವಿತ್ರನ್ ಗುಂಡ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
- Thursday
- November 21st, 2024