Ad Widget

ಅಕ್ರಮ ಮರ ಸಾಗಾಟ – ಲಾರಿ ಸಹಿತ ಆರೋಪಿ ವಶಕ್ಕೆ

. . . . . . . . .

ಸಂಪಾಜೆ ವಲಯ ವ್ಯಾಪ್ತಿಯ ಅರಣ್ಯ ತನಿಖಾ ಠಾಣೆ ಸಂಪಾಜೆಯಲ್ಲಿ ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಯಾದ ಮಹಮ್ಮದ್ ಸಫ್ಯಾನ್ ನನ್ನು ಬಂಧಿಸಿದ್ದು, ವಾಹನ ಹಾಗೂ 12 ಹೆಬ್ಬಲಸು ಮರದ ತುಂಡುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಕಾರ್ಯಾಚರಣೆಯಲ್ಲಿ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪೂವಯ್ಯ.ಎ.ಟಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮೊಯಿಷಿನ್ ಬಾಷಾ ಹಾಗೂ ವಲಯ ಅರಣ್ಯಾಧಿಕಾರಿ ಅನನ್ಯಕುಮಾರ್ ಮಾರ್ಗದರ್ಶನದಲ್ಲಿ ಸಿಬ್ಬಂದಿ ಬಸವರಾಜಪ್ಪ ಉಪ ವಲಯ ಅರಣ್ಯಾಧಿಕಾರಿ ಪತ್ತೆ ಹಚ್ಚಿರುತ್ತಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ವಿನಯಕೃಷ್ಣ.ಎಂ.ಸಿ., ಉಪ ವಲಯ ಅರಣ್ಯಾಧಿಕಾರಿ, ಗಸ್ತು ಅರಣ್ಯಪಾಲಕರಾದ ನಾಗರಾಜ್.ಎಸ್, ಕಾರ್ತಿಕ್ ಡಿ., ವಾಹನ ಚಾಲಕರಾದ ಶಿವಪ್ರಸಾದ್, ಮನೋಜ್‌ ಹಾಗೂ ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading