ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಮಾರ್ಟ್ ಕ್ಲಾಸ್ ರೊಮ್ ಉದ್ಘಾಟಣಾ ಕಾರ್ಯಕ್ರಮವು ಮಾ.೧೧ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಕೆ.ವಿ.ಜಿ.ಸಿ.ಇ.ಯ ಹೆಮ್ಮೆಯ 1991-92ನೇ ಬ್ಯಾಚ್ನ ಹಳೆ ವಿದ್ಯಾರ್ಥಿಗಳಾದ ಶಂಕರ್ ದಯಾಳ್ ಹಾಗೂ ಶರತ್ ಕುಮಾರ್ ಅತಿಥಿಗಳಾಗಿ ಆಗಮಿಸಿದ್ದರು. ಉದ್ಘಾಟಕರಾಗಿ ಡಾ. ರೇಣುಕಾ ಪ್ರಸಾದ್ ಕೆ.ವಿ.ಯವರು ನೆರವೇರಿಸಿದರು. ಅವರು ಮಾತನಾಡಿ ಹಳೆ ವಿದ್ಯಾರ್ಥಿಗಳು ಕಾಲೇಜಿನ ಆಸ್ತಿ. ಕಾಲೇಜು ನೀಡಿದ ನಾಲ್ಕು ವರ್ಷಗಳ ವಿದ್ಯಾರ್ಜನೆಯನ್ನು ನೆನಪಿಸಿಕೊಂಡು ಮರಳಿ ಕಾಲೇಜಿಗೆ ಕೊಡುಗೆಯನ್ನು ನೀಡಿರುವುದು ಹೆಮ್ಮೆಯ ವಿಷಯ ಎಂದು ಹೇಳಿ ಅಭಿನಂದನೆಯನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಿಶೇಷ ಅತಿಥಿ ಶ್ರೀ ಎನ್.ಎ. ರಾಮಚಂದ್ರ ಅವರು ಮಾತನಾಡಿ ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಈಗಿನ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಮುನ್ನಡೆಯುವುದು ಬಹಳ ಮುಖ್ಯವಾಗಿದೆ. ಈ ದಿಶೆಯಲ್ಲಿ ನಮ್ಮ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ಉತ್ತಮ ಮಟ್ಟಕ್ಕೆ ಬೆಳೆದು ನಿಂತಿರುವುದು ಖುಷಿ ತಂದಿದೆ ಎಂದರು. ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಯವರು ಮಾತನಾಡಿ “ರಾಷ್ಟಿಯ ನೂತನ ಶಿಕ್ಷಣ ನೀತಿಯ ಪ್ರಕಾರ ಹೊಸ ತಂತ್ರಜ್ಞಾನದೊಂದಿಗೆ ಮುಂದುವರಿಯುವುದು ಹಾಗೂ ಅದನ್ನು ಅಳವಡಿಸಿಕೊಳ್ಳುವುದು ಕಾಲೇಜಿನ ಅಭಿವೃದ್ಧಿಗೆ ಬಹಳ ಪೂರಕವಾದ ವಿಷಯವಾಗಿದೆ ಹಾಗೂ ಹೊಸ ತಂತ್ರಜ್ಞಾನ ಉಪಯೋಗಿಸಿಕೊಂಡು ವಿದ್ಯಾರ್ಥಿಗಳಿಗೆ ವಿವಿಧ ತರಬೇತಿ ಶಿಬಿರಗಳನ್ನು ನಡೆಸಲು ಹಾಗೂ ಕಾಲೇಜಿನಿಂಡ ವಿವಿಧ ಕಂಪೆನಿಗಳಿಗೆ ನಿಯೋಜನೆಗೊಳ್ಳಲು ಇದು ಬಹಳ ಪೂರಕವಾಗಿದೆ ಎಂದು ಹೇಳಿ 1992ನೇ ಬ್ಯಾಚ್ನ ಹಳೆ ವಿದ್ಯಾರ್ಥಿ ಸಂಘಕ್ಕೆ ಕೃತಜ್ಞತೆಯನ್ನು ಸಲ್ಲಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಡಾ. ಸುರೇಶ ವಿ.ಯವರು ಮಾತನಾಡಿ ಕಾಲೇಜಿನಿಂದ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿರುವುದು ಹಾಗೂ ಗ್ರಾಮೀಣ ಪ್ರತಿಭೆಗಳನ್ನು ಬೆಳಸುತ್ತಿರುವುದು ಇದು ಶ್ರೀ ಕುರುಂಜಿ ವೆಂಕಟ್ರಮಣ ಗೌಡರಿಗೆ ಸಲ್ಲಿಸುವ ಗೌರವ ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳು ಉನ್ನತ ಮಟ್ಟಕ್ಕೆ ಬೆಳೆದು ಕಾಲೇಜಿನ ಗೌರವ ಹೆಚ್ಚಿಸಬೇಕು ಎಂದು ಹೇಳಿದರು. ಡೀನ್-ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್. ಅತಿಥಿಗಳನ್ನು ಸ್ವಾಗತಿಸಿದರು. ಡೀನ್-ಎಕ್ಸಾಮಿನೇಶನ್ ಹಾಗೂ ಫಿಸಿಕ್ಸ್ ವಿಭಾಗ ಮುಖ್ಯಸ್ಥರು ಡಾ. ಪ್ರವೀಣ ಎಸ್.ಡಿ. ವಂದಿಸಿದರು. ವಿದ್ಯಾರ್ಥಿನಿಯರಾದ ಅನ್ವಿತಾ ಮತ್ತು ಅನುಷಾ ಪ್ರಾರ್ಥಿಸಿದರು. ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿAಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರುಗಳಾದ ಪ್ರೊ. ಭವ್ಯ ಪಿ.ಎಸ್. ಹಾಗೂ ಪ್ರೊ. ಸಿಂಧು ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಡಾ. ಪ್ರಜ್ಞಾ ಎಂ.ಆರ್. ಮತ್ತು ಪ್ರೊ. ಲೋಕೇಶ್ ಪಿ.ಸಿ., ಡೀನ್-ರೀಸರ್ಚ್ ಡಾ. ಸವಿತಾ ಸಿ.ಕೆ., ಡೀನ್-ಅಡ್ಮಿಶನ್ ಪ್ರೊ. ಬಾಲಪ್ರದೀಪ್ ಕೆ.ಎನ್. ಕಾರ್ಯಕ್ರಮವನ್ನು ಸಂಯೋಜಿಸಿದರು. ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರೊ. ಮಹಾಬಲೇಶ್ವರ ಸಿ.ಹೆಚ್. ಹಾಗೂ ಉಪನ್ಯಾಸಕ ವೃಂದ, ಕೆ.ವಿ.ಜಿ. ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಶ್ರೀ ಜಯಪ್ರಕಾಶ್ ಕೆ ಮತ್ತು ಉಪನ್ಯಾಸಕ ವೃಂದ, ಕೆ.ವಿ.ಜಿ. ಐ.ಟಿ.ಐ. ಪ್ರಾಂಶುಪಾಲರಾದ ಶ್ರೀ ಚಿದಾನಂದ ಗೌಡ ಬಾಳಿಲ ಮತ್ತು ಉಪನ್ಯಾಸಕ ವೃಂದ, ಕೆ.ವಿ.ಜಿ ಅಮರಜ್ಯೋತಿ ಪಿ.ಯು. ಕಾಲೇಜಿನ ಉಪನ್ಯಾಸಕ ವೃಂದ, ಕೆ.ವಿ.ಜಿ. ಇಂಟರ್ನ್ಯಾಶನಲ್ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಶ್ರೀ ಅರುಣ್ ಕುಮಾರ್ ಮತ್ತು ಉಪನ್ಯಾಸಕ ವೃಂದ, ಕೆ.ವಿ.ಜಿ. ಐ.ಟಿ.ಐ. ಭಾಗಮಂಡಲ ಇದರ ಪ್ರಾಂಶುಪಾಲರಾದ ಶ್ರೀಕಾಂತ್ ಕುಡೆಕಲ್ಲು ಮತ್ತು ಉಪನ್ಯಾಸಕ ವೃಂದ, ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ಬೋದಕ, ಬೋದಕೇತರ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆನ್ಲೈನ್ ಪ್ಲಾಟ್ಫಾರ್ಮ್ ಮೂಲಕ ಹೊರ ದೇಶದಲ್ಲಿ ನೆಲೆಸಿರುವ ನೂರಾರು ಹಳೆವಿದ್ಯಾರ್ಥಿಗಳು ವೀಕ್ಷಿಸಿದರು.
- Saturday
- November 23rd, 2024