Ad Widget

ನಂದಕುಮಾರ್ ಗೆ ಟಿಕೇಟ್ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೇಸ್ ಕಚೇರಿ ಎದುರು ಸುಳ್ಯದ ಕಾಂಗ್ರೇಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

. . . . . . . . .

ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ (Sullia Congress) ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ನಡೆಸಿದ್ದಾರೆ.

. . . . . . .

‘ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕು’. ‘ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ.

ನೂರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆದು , ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮೂಲಕ ಮನವಿ ಸಲ್ಲಿಸಿದ್ದಾರೆ.

ಪಟ್ಟಿ ಪರಿಷ್ಕರಣೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರಬಲ ಒತ್ತಾಯವಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ಸಿನಲ್ಲಿ ಒಬ್ಬ ಅಭ್ಯರ್ಥಿಗೆ ಟಿಕೇಟ್ ನೀಡಬೇಕೆಂಬ ಪ್ರತಿಭಟನೆ ಮೊದಲ ಬಾರಿ ನಡೆಯುತ್ತಿದೆ .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading