ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಮಾರ್ಚ್ 28 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕೆ.ವಿ.ಜಿ. ಇಂಟರ್ನ್ಯಾಶನಲ್ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರಾದ ಅರುಣ್ ಕುಮಾರ್ ಮುಖ್ಯ ಅತಿಥಿಗಳಾಗಿದ್ದರು. ಮುಖ್ಯ ಅತಿಥಿಗಳ ದಿಶೆಯಲ್ಲಿ ಮಾತನಾಡಿದ ಅವರು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆಯ ಮಹತ್ವ ಬಹಳ ಹೆಚ್ಚಿನದ್ದು. ಕ್ರೀಡೆಯಲ್ಲಿ ಹೆಚ್ಚಿನ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸರಕಾರದ ಉದ್ಯೋಗಾವಕಾಶ ಹೆಚ್ಚು ಎಂದು ನುಡಿದು ನೆರೆದ ಸರ್ವರಿಗೂ ಕ್ರೀಡಾ ಕೂಟಕ್ಕೆ ಶುಭ ಹಾರೈಸಿ ಎಲ್ಲರೂ ಕ್ರೀಡಾ ಮನೋಭಾವದಿಂದ ಇವತ್ತಿನ ದಿನವನ್ನು ಅನಂದಿಸಿ ಎಂದು ನುಡಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ಮಾತನಾಡಿ ವಿದ್ಯಾರ್ಥಿಗಳ ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು. ಕೆ.ವಿ.ಜಿ. ಇಂಟರ್ನ್ಯಾಶನಲ್ ಪಬ್ಲಿಕ್ ಸ್ಕೂಲ್ನ ದೈಹಿಕ ಶಿಕ್ಷಕರಾದ ತೀರ್ಥವರ್ಣ ತೀರ್ಪುಗಾರರಾಗಿ ಸಹಕರಿಸಿದರು. ಕ್ರೀಡಾ ಕೂಟದಲ್ಲಿ ಎನ್.ಎಸ್.ಎಸ್. ವತಿಯಿಂದ ತಂಪಾದ ಪಾನೀಯ ವಿತರಣೆ ಮತ್ತು ಪ್ರಥಮ ಚಿಕಿತ್ಸೆಯ ಸೌಲಭ್ಯವನ್ನು ಒದಗಿಸಿದರು.ದೈಹಿಕ ಉಪನ್ಯಾಸಕರಾದ ಭಾಸ್ಕರ್ ಎಸ್.ಬಿ., ಪ್ರೊ. ಅಜಿತ್ ಬಿ.ಟಿ., ಎನ್.ಎಸ್. ಘಟಕಾಧಿಕಾರಿ ಡಾ. ಪ್ರಜ್ಞ ಎಂ.ಆರ್ ಮತ್ತು ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಪ್ರೊ. ಲೋಕೇಶ್ ಪಿ.ಸಿ ಕ್ರೀಡಾ ಕೂಟದ ಕಾರ್ಯಕ್ರಮವನ್ನು ಸಂಯೋಜಿಸಿದರು. ಉಪ ಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ, ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ಅರುಣ ಕುರುಂಜಿ, ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಬೋದಕ, ಬೋದಕೇತರ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಆಟೋಟ ಸ್ಪರ್ಧೆಗಳ ಜೊತೆಗೆ ಉಪನ್ಯಾಸಕ ವೃಂದದವರಿಗೂ ಸ್ಲೋ ಬೈಕ್ ರೇಸಿಂಗ್ ಸ್ಪರ್ಧೆಯನ್ನು ಆಯೋಜಿಸಿದ್ದು, ಅದು ಕ್ರೀಡಾಕೂಟಕ್ಕೆ ಹೆಚ್ಚಿನ ಮೆರುಗನ್ನು ತಂದಿತ್ತು.
- Thursday
- November 21st, 2024