ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಎಂಬವರಿಗೂ ಅವರ ಮಗ ಶಿವರಾಮ ಎಂಬವರಿಗೂ ನಿನ್ನೆ ರಾತ್ರಿ 12 ಗಂಟೆಗೆ ಕೋಳಿ ಪದಾರ್ಥದ ವಿಚಾರವಾಗಿ ಜಗಳ ಆರಂಭವಾಯಿತು. ಶಿವರಾಮ ರಾತ್ರಿ ಮನೆಗೆ ಬರುವಾಗ ಕೋಳಿ ಪದಾರ್ಥ ಖಾಲಿ ಆಗಿತ್ತೆನ್ನಲಾಗಿದೆ. ಇದನ್ನು ಆಕ್ಷೇಪಿಸಿ ಆತ ಮಾತನಾಡತೊಡಗಿದಾಗ ತಂದೆ ಶೀನರಿಗೂ ಆತನಿಗೂ ಜಗಳ ಆರಂಭವಾಯಿತು. ಕೋಪಗೊಂಡ ಶೀನ ಬಡಿಗೆಯಿಂದ ಮಗನ ತಲೆಗೆ ಹೊಡೆದರೆನ್ನಲಾಗಿದೆ. ತಲೆಗೆ ಬಿದ್ದ ಬಲವಾದ ಏಟಿನ ಪರಿಣಾಮವಾಗಿ ಶಿವರಾಮ ಸ್ಥಳದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದನೆನ್ನಲಾಗಿದೆ.
ವಿಷಯ ತಿಳಿದು ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ಶೀನನನ್ನು ಬಂಧಿಸಿದ್ದಾರೆ.
ಶಿವರಾಮರು (32ವರ್ಷ) ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.