ಸರಕಾರಿ ಪ್ರೌಢಶಾಲೆ ಎಲಿಮಲೆ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇದರ ಜಂಟಿ ಆಶ್ರಯದಲ್ಲಿ ಏ.17 ಮತ್ತು 18 ರಂದು ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಸಾಹಸಮಯ ಶಿಬಿರ ನಡೆಯಿತು. ಏ.17 ರಂದು ಇದರ ಉದ್ಘಾಟನಾ ಸಮಾರಂಭ ನಡೆಯಿತು.ಎಸ್.ಡಿ.ಎಂ.ಸಿ ಸರಕಾರಿ ಪ್ರೌಢಶಾಲೆ ಎಲಿಮಲೆ ಕಾರ್ಯಾಧ್ಯಕ್ಷರಾದ ಜಯಂತ ಹರ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಎಂ.ಜಿ ಕಜೆ ಕಾರ್ಯಕ್ರಮ ಹಾಗೂ ಸಾಹಸಮಯ ಶಿಬಿರದ ಉದ್ಘಾಟನೆ ಮಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಸುಬ್ರಹ್ಮಣ್ಯದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಕೆ.ಎಸ್.ಎಸ್ ಕಾಲೇಜು ಸುಬ್ರಹ್ಮಣ್ಯದ ಪ್ರಾಂಶುಪಾಲರಾದ ದಿನೇಶ್ ಪಿ.ಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಇವರುಗಳು ಉಪಸ್ಥಿತರಿದ್ದರು.
ಗೌರವ ಉಪಸ್ಥಿತರಾಗಿ ದೇವಚಳ್ಳ ಮತ್ತು ಗುತ್ತಿಗಾರು ಕ್ಲಸ್ಟರ್ ಸಿ.ಆರ್.ಪಿ ಸಂತೋಷ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಕ್ಕಬಳ್ಳಾಪುರ ಜಿಲ್ಲಾ ಎಸ್.ಜೆ.ವಿ ಮಹಮ್ಮದ್ ನೌಫಲ್ ಆರ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ವಲಯಾಧ್ಯಕ್ಷರಾದ ಮಾಧವ.ಬಿ.ಕೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸುಳ್ಯ ವಲಯಾಧ್ಯಕ್ಷರಾದ ಶಶಿಧರ್.ಎಂ.ಜೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸುಳ್ಯ ವಲಯ ಕಾರ್ಯದರ್ಶಿ ಪ್ರೇಮಲತಾ.ಎ.ಹೆಚ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪಂಜ ವಲಯ ಕಾರ್ಯದರ್ಶಿ ಉದಯ ಕುಮಾರ್ ರೈ, ಆರ್.ಎಸ್.ಎಲ್ ಕೆ.ಎಸ್.ಎಸ್ ಕಾಲೇಜು ಸುಬ್ರಹ್ಮಣ್ಯ ರಾಮಪ್ರಸಾದ್.ಎಸ್, ಆರ್.ಎಸ್.ಎಲ್ ಕೆ.ಎಸ್.ಎಸ್ ಕಾಲೇಜು ಸುಬ್ರಹ್ಮಣ್ಯ ಎನ್. ಪ್ರಮೀಳಾ, ಆರ್.ಎಸ್.ಎಲ್ ಕೆ.ಎಸ್.ಎಸ್ ಕಾಲೇಜು ಸುಬ್ರಹ್ಮಣ್ಯ ಅಶ್ವಿನಿ.ಎನ್.ಎಸ್ ಇವರುಗಳು ಉಪಸ್ಥಿತರಿದ್ದರು.
- Tuesday
- December 3rd, 2024