ಹರಿಹರ ಪಲ್ಲತ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಯಿಂದ ಬ್ಯಾಟರಿ ಕಳ್ಳತನವಾಗಿರುವ ಘಟನೆ ವರದಿಯಾಗಿದೆ.
ಈ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರಾದ ರಾಮಚಂದ್ರ ಕಜ್ಜೋಡಿ ಅವರು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಏ.15 ರಂದು ಶಾಲಾ ಕೊಠಡಿಗೆ ಬೀಗ ಹಾಕಿ ತೆರಳಿದ್ದು, ಏ.18 ರಂದು ಶಾಲೆಗೆ ಬಂದಾಗ ಕಂಪ್ಯೂಟರ್ ಕೊಠಡಿಯ ಬಾಗಿಲಿನ ಬೀಗ ಒಡೆದಿರುವುದು ಗಮನಕ್ಕೆ ಬಂದಿದ್ದು, ಕೊಠಡಿಯ ಒಳಗೆ ಹೋಗಿ ನೋಡಿದಾಗ ಬ್ಯಾಟರಿ ಕಳ್ಳತನವಾಗಿರುವುದು ತಿಳಿದುಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
- Friday
- April 4th, 2025