ತಾಯಿ-ಮಗಳು ಜತೆಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದು, ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ.
ಸುಳ್ಯ ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ ಮತ್ತು ಅವರ ಪುತ್ರಿ ತ್ರಿಷಾ ಒಟ್ಟಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ತಾಯಿ ಮತ್ತು ಮಗಳು. ಗೀತಾ ಅವರು ಸುಳ್ಯ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿದ್ದು, ತಮ್ಮ ವೃತ್ತಿ ಜೀವನದ ಮಧ್ಯೆ ಬಿಡುವು ಮಾಡಿಕೊಂಡು ಅಧ್ಯಯನ ಮುಂದುವರಿಸಿದ್ದರು.ಈ ಹಿಂದೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದು, ಇದೀಗ ಖಾಸಗಿಯಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿಯೂ ಪರೀಕ್ಷೆ ಬರೆದು ಪಾಸಾಗಿದ್ದಾರೆ. ಆ ಮೂಲಕ ಗೀತಾ ರವರ ಬಹುದಿನದ ಕನಸು ಈಡೇರಿದೆ.
- Friday
- November 22nd, 2024