
ಸುಳ್ಯ: ಕರ್ನಾಟಕದಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಇಂತಹಾ ಸಂದರ್ಭದಲ್ಲಿ SSLC ಪರೀಕ್ಷೆ ಜೂನ್ 25 ರಿಂದ ಜುಲೈ 4 ರವರೆಗೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಸರಕಾರ ಮರು ಪರಿಶೀಲಿಸಿ ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಕಾಪಾಡುವ ನಿಟ್ಟಿನಲ್ಲಿ ನಿಗದಿಯಾಗಿರುವ ಪರೀಕ್ಷೆಯನ್ನು ಶೀಘ್ರ ಮುಂದೂಡಿಸಿ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಸುಳ್ಯ ಏರಿಯಾ ಸಮಿತಿಯ ವತಿಯಿಂದ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಅನೀಸ್ ಪುತ್ತೂರು, ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅನ್ಸಾರ್ ಬೆಳ್ಳಾರೆ,ಸುಳ್ಯ ಏರಿಯಾ ಅಧ್ಯಕ್ಷರಾದ ಅರ್ಫೀದ್ ಅಡ್ಕಾರ್, ಕಾರ್ಯದರ್ಶಿ ಸಾಜಿದ್ ಸುಳ್ಯ,ಸಮಿತಿ ಸದಸ್ಯರಾದ ಶಿಬಿಲಿ ಹಾಗೂ ಕೆವಿಜಿ ಇಂಜಿನಿಯರಿಂಗ್ ಕಾಲೇಜ್ ಯುನಿಟ್ ಅಧ್ಯಕ್ಷರಾದ ವಾಹಿದ್ ಉಪಸ್ಥಿತರಿದ್ದರು.