Ad Widget

ಸುಳ್ಯದಲ್ಲಿ ಭರ್ಜರಿ ಪ್ರಚಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ – ಕೇಂದ್ರದ ಯೋಜನೆ ಸಮರ್ಪಕವಾಗಿ ರಾಜ್ಯದ ಜನತೆಗೆ ತಲುಪಲು ಡಬಲ್ ಇಂಜಿನ್ ಸರಕಾರಕ್ಕೆ ಮಾತ್ರ ಸಾಧ್ಯ – ಸುಳ್ಯ ಹಾಗೂ ರಾಜ್ಯದ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಗೆಲ್ಲಿಸಲು ಕರೆ

ಸುಳ್ಯದ ಹಾಗೂ ರಾಜ್ಯದ ಭವಿಷ್ಯದ ದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ನೀಡಿದರು.

. . . . . . . . .

ಅವರು ಸುಳ್ಯದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಪರ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ ಸರಕಾರದ ಯೋಜನೆಗಳು ರಾಜ್ಯದ ಜನರಿಗೆ ತಲುಪಬೇಕಾದರೇ ಇಲ್ಲಿಯೂ ಡಬಲ್ ಎಂಜಿನ್ ಸರಕಾರ ಮತ್ತೊಮ್ಮೆ ಅಧಿಕಾರ ಬರಬೇಕಿದೆ. ಕಾಂಗ್ರೆಸ್ ಸರಕಾರ ಅಸ್ತಿತ್ವದಲ್ಲಿದ್ದಾಗ ಕೇಂದ್ರದ ಬಿಜೆಪಿ ಸರಕಾರ ಜಾರಿಗೆ ತಂದ ಜನಪರ ಯೋಜನೆಗಳಿಗೆ ಬ್ರೇಕ್ ನೀಡಿತ್ತು. ಇಂತಹ ಸಮಸ್ಯೆ ಬಾರದಿರಲು ಡಬಲ್ ಎಂಜಿನ್ ಸರಕಾರವೇ ಬೇಕು ಎಂದು ಪ್ರತಿಪಾದಿಸಿದರು. ಕಾರ್ಯಕ್ರಮ ಕ್ಕೆ ಮೊದಲು ದಿ.ಪ್ರವೀಣ್ ನೆಟ್ಟಾರು ಮನೆಗೆ ತೆರಳಿ ಮನೆಯವರ ಧೈರ್ಯ ತುಂಬಿದರು. ನಿಮ್ಮ ಜೊತೆಗೆ ಬಿಜೆಪಿ ಸದಾ ಇದೆ ಎಂದು ಭರವಸೆ ನೀಡಿದರು.
ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಜಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಎಸ್. ಅಂಗಾರ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹಾಗೂ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading