
ಸುಳ್ಯ; ಬೈಕ್ ಅಪಘಾತ ಓರ್ವ ಮೃತ್ಯುಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸುಳ್ಯದ ಪಾಲಡ್ಕ ಎಂಬಲ್ಲಿ ಮೇ.22 ರಂದು ಸಂಭವಿಸಿದೆ.ಮೃತಪಟ್ಟಾತ ಕೆವಿಜಿ ಆಯುರ್ವೇದ ಕಾಲೇಜು ವಿಧ್ಯಾರ್ಥಿ ಸ್ವರೂಪ್(22) ಎಂದು ಗುರುತಿಸಲಾಗಿದೆ.ಈತ ಬೈಕ್ ನಲ್ಲಿ ತೆರಳುತ್ತಿದ್ದು ಓವರ್ ಟೇಕ್ ಮಾಡುವ ರಭಸದಲ್ಲಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಎನ್ನಲಾಗಿದೆ. ಈ ವೇಳೆ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
