ನವದೆಹಲಿ ಎಲ್ಲ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ . ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯ ತಿಳಿಸಿದ್ದಾರೆ . ವಾಣಿಜ್ಯ ಬ್ಯಾಂಕುಗಳಿಗೆ ಅನ್ವಯವಾಗುವ ಆರ್‌ಬಿಐ ಮೇಲ್ವಿಚಾರಣಾ ಪ್ರಕ್ರಿಯೆಯಡಿ ನಗರ ಸಹಕಾರಿ ಬ್ಯಾಂಕುಗಳು ಮತ್ತು ಬಹು – ರಾಜ್ಯ ಸಹಕಾರಿ ಬ್ಯಾಂಕುಗಳನ್ನು ತರಲಾಗುವುದು ಎಂದು ಜಾವಡೇಕರ್ ಹೇಳಿದರು .
ಸುಮಾರು 1,482 ನಗರ ಸಹಕಾರಿ ಬ್ಯಾಂಕುಗಳು ಮತ್ತು 58 ಬಹು ರಾಜ್ಯ ಸಹಕಾರಿ ಬ್ಯಾಂಕುಗಳು ಸುಮಾರು 8.6 ಕೋಟಿ ಠೇವಣಿದಾರರನ್ನು ಹೊಂದಿದೆ ಎಂದು ಅವರು ತಿಳಿಸಿದರು . ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ( ಪಿಎಮ್‌ಸಿ ) ಬ್ಯಾಂಕ್ ಬಿಕ್ಕಟ್ಟಿನ ಹಿನ್ನಲೆಯಲ್ಲಿ 1.540 ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ( ಆರ್‌ಬಿಐ ) ನಿಯಂತ್ರಣಕ್ಕೆ ತರಲು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಫೆಬ್ರವರಿಯಲ್ಲಿ ಅನುಮೋದನೆ ನೀಡಿತ್ತು .
- Friday
- November 22nd, 2024