ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಸುಳ್ಯ ತಾಲೂಕಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶಾಸಕರಾದ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಆರೋಗ್ಯ ಕೊಠಡಿ, ಪ್ರಾಂಶುಪಾಲರ ನೂತನ ಕೊಠಡಿ, ಐಟಿ ಮತ್ತು ಕಂಪ್ಯೂಟರ್ ಕೊಠಡಿ, ಶೌಚಾಲಯ, ಸ್ಮಾರ್ಟ್ ಕ್ಲಾಸ್, ಗ್ರಂಥಾಲಯಗಳಿಗೆ ತೆರಳಿ ಮಾಹಿತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸರ್ಕಾರದಿಂದ ಬರುವ ಯೋಜನೆಗಳನ್ನು ನೀಡುವುದಾಗಿ ಹೇಳಿದರು.
- Sunday
- November 24th, 2024