Ad Widget

ಅಪಾಯದ ಸ್ಥಿತಿಯಲ್ಲಿರುವ ಅರಮನೆಗಯ ತೂಗುಸೇತುವೆ ವೀಕ್ಷಿಸಿದ ಶಾಸಕಿ ಭಾಗೀರಥಿ ಮುರುಳ್ಯ – ಸೇತುವೆ ನಿರ್ಮಾಣಕ್ಕೆ ಪ್ರಥಮ ಆದ್ಯತೆ ನೀಡುವ ಭರವಸೆ

ಬಹುವರ್ಷಗಳ ಬೇಡಿಕೆಯಾಗಿರುವ ಮರ್ಕಂಜ ಹಾಗೂ ಅರಂತೋಡು ಗ್ರಾಮಗಳನ್ನು ಸಂಪರ್ಕಿಸುವ ಅರಮನೆಗಯ ಎಂಬಲ್ಲಿ ಸೇತುವೆ ನಿರ್ಮಾಣ ಮಾಡಬೇಕೆಂಬ ಕೂಗು ಬಹುದಿನಗಳಿಂದ ಕೇಳಿ ಬಂದಿತ್ತು. ಅರಮನೆಗಯ ನಿವಾಸಿಗಳು ಹಲವಾರು ವರ್ಷಗಳಿಂದ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ನೀಡುತ್ತಾ ಬಂದಿದ್ದರೂ ಸೇತುವೆಯ ಕನಸು ನನಸಾಗಿಯೇ ಉಳಿದಿದೆ. ಇರುವ ಒಂದು ತೂಗುಸೇತುವೆ ಕೂಡ ಮುರಿದು ಬೀಳುವ ಸ್ಥಿತಿಯಲ್ಲಿದ್ದು, ಇದನ್ನೇ ಇಲ್ಲಿನ ಜನ ಹಾಗೂ ಶಾಲಾ ಮಕ್ಕಳು ಬಳಸಬೇಕಾದ ಅನಿವಾರ್ಯತೆ ಇದೆ.

. . . . . . . . .


ಕಾರ್ಯಕ್ರಮದ ನಿಮಿತ್ತ ಅಡ್ತಲೆಗೆ ಆಗಮಿಸಿದ್ದ ನೂತನ ಶಾಸಕರಾದ ಭಾಗೀರಥಿ ಮುರುಳ್ಯ ಅವರಿಗೆ ಇಲ್ಲಿನ ನಿವಾಸಿಗಳು ನೀಡಿದ ಮನವಿಗೆ ಸ್ಪಂದಿಸಿದ್ದು, ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಸೇತುವೆ ನಿರ್ಮಿಸಲು ಪ್ರಥಮ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಗ್ರಾ.ಪಂ.ಸದಸ್ಯ ಕೇಶವ ಅಡ್ತಲೆ, ಅರಂತೋಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮತ್ತಿತರರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading