ಸುಳ್ಯ ಕೆ.ಎಸ್.ಆರ್.ಟಿ.ಸಿ.ಬಸ್ ಸ್ಟಾಂಡ್ ಗೆ ಇಂದು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿದರು. ಸರ್ಕಾರದ ಶಕ್ತಿ ಯೋಜನೆ ಯ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡರು. ನಂತರ ಮಹಿಳಾ ಪ್ರಯಾಣಿಕರ ಜೊತೆ ಮಾತುಕತೆ ನಡೆಸಿ, ಮಹಿಳಾ ವಿಶ್ರಾಂತಿ ಕೊಠಡಿ ಮತ್ತು ಶಿಶು ಆರೈಕೆ ಕೊಠಡಿಗೆ ತೆರಳಿ ಪರಿಶೀಲನೆ ನಡೆಸಿದರು. ಬಸ್ ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರಿಗೆ ಮತ್ತು ಜನ ಸಾಮಾನ್ಯರಿಗೆ ಯಾವುದೇ ತೊಂದರೆ ಆಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರಿಸರವನ್ನು ಸದಾ ಸ್ವಚ್ಛವಾಗಿಡಲು ತಿಳಿಸಿದರು. ನಂತರ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಮೂಲಭೂತ ಸೌಕರ್ಯಗಳ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯರು, ಜನಪ್ರತಿನಿದಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
- Thursday
- November 21st, 2024