Ad Widget

ಸುಳ್ಯ : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಜಂಟಿ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಇದರ ಜಂಟಿ ಆಶ್ರಯದಲ್ಲಿ ಜೂ.14 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಇಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಹಾಗೂ ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಘಟನೆಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್.ಕೆ.ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಸಭಾಪತಿ ಸುಧಾಕರ ರೈ ಅಭಿನಂದನಾ ಭಾಷಣ ನೆರವೇರಿಸಿದರು. ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ 20 ವರ್ಷಗಳ ಕಾಲ ಸೇವೆಗೈದು ಸೇವಾ ನಿವೃತ್ತಿಯನ್ನು ಹೊಂದಿದ ಲೋಕೇಶ್ ಅಜ್ಜಾವರ ಅವರನ್ನು ಸುಳ್ಯ ನಗರದಿಂದ ಮೆರವಣಿಗೆ ಮೂಲಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲ್ ಗೆ ಸ್ವಾಗತಿಸಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಕೆ.ಎಂ ಮುಸ್ತಫ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಪ್ರತಿನಿಧಿ ಸಿ.ಎ ಗಣೇಶ್ ಭಟ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಖಜಾಂಜಿ ವಿನಯ್ ಕುಮಾರ್ ಹಾಗೂ ಕಾರ್ಯದರ್ಶಿ ತಿಪ್ಪೇಶಪ್ಪ.ಹೆಚ್.ಟಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ರಕ್ತದಾನ ಹಾಗೂ ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಘ-ಸಂಸ್ಥೆಗಳಾದ ಲಯನ್ಸ್ ಕ್ಲಬ್ ಹಿರಿಯಡ್ಕ ಉಡುಪಿ ಜಿಲ್ಲೆ, ರೋಟರಿ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ ಸಿಟಿ, ಯೂತ್ ರೆಡ್ ಕ್ರಾಸ್ ಸ.ಪ್ರ.ದ ಕಾಲೇಜು ಸುಳ್ಯ, ಯೂತ್ ರೆಡ್ ಕ್ರಾಸ್ ಎನ್.ಎಂ.ಸಿ ಸುಳ್ಯ, ಮಂಜುಶ್ರೀ ಗೆಳೆಯರ ಬಳಗ ಐವರ್ನಾಡು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್(ರಿ.) ಸಂಪಾಜೆ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್(ರಿ.) ಸುಬ್ರಹ್ಮಣ್ಯ ವಲಯ, ಯುವ ತೇಜಸ್ಸು ಟ್ರಸ್ಟ್(ರಿ.), ಕಾರುಣ್ಯ ಚಾರಿಟೇಬಲ್ ಟ್ರಸ್ಟ್(ರಿ.) ಪೈಚಾರು ಸುಳ್ಯ, ಮಾಜಿ ಸೈನಿಕರ ಸಂಘ ಸುಳ್ಯ ತಾಲೂಕು, ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು ಸಂಘಟನೆಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!