Ad Widget

ಶಾಸಕಿ ಭಾಗೀರಥಿ ಹಾಗೂ ಎ.ಸಿ.ಗಿರೀಶ್ ನಂದನ್ ಶಾಂತಿನಗರ ಕ್ರೀಡಾಂಗಣಕ್ಕೆ ಭೇಟಿ

ಸುಳ್ಯದ ಶಾಂತಿನಗರದಲ್ಲಿ ಕಾಮಗಾರಿ ನಡೆಯುತ್ತಿರುವ ತಾಲೂಕು ಕ್ರೀಡಾಂಗಣಕ್ಕೆ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರು ವಿಭಾಗದ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರು ಜೂ.19ರಂದು ಭೇಟಿ ನೀಡಿ ಕಾಮಗಾರಿಯ ವೀಕ್ಷಣೆ ಮಾಡಿ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು.ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು ಕ್ರೀಡಾಂಗಣದ ಒಂದು ಭಾಗದಲ್ಲಿ ಹಾಕಿರುವ ಮಣ್ಣಿನಿಂದ ಸ್ಥಳೀಯ ಜನತೆ ಆತಂಕದಲ್ಲಿದ್ದು ಮಳೆಗಾಲದಲ್ಲಿ ಮಣ್ಣು ಕುಸಿಯುವ ಭಯವನ್ನು ಅವರು ವ್ಯಕ್ತಪಡಿಸುತ್ತಿದ್ದು ಕೂಡಲೇ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಶಾಸಕರು ನಿರ್ಮಿತಿ ಕೇಂದ್ರದ ಇಂಜಿನಿಯರ್‌ಗೆ ನಿರ್ದೇಶನ ನೀಡಿದ್ದಾರೆ. ಈ ಸಂದರ್ಭದಲ್ಲಿ ಇಂಜಿನಿಯರ್ ಹರೀಶ್ ಶಾಸಕರ ಬಳಿ ಮಾತನಾಡಿ ಈಗಾಗಲೇ ಇರುವ ತಡೆಗೋಡೆಯನ್ನು ಬಲಪಡಿಸಿ, ಅದನ್ನು ಎತ್ತರಿಸಿ ಅಂದಾಜು ಸುಮಾರು 10 ಲಕ್ಷ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಮಾಡಬಹುದು ಎಂದು ಹೇಳಿದರು. ಇದಕ್ಕೆ ಶಾಸಕರು ಒಪ್ಪಿಗೆ ಸೂಚಿಸಿ ಆದಷ್ಟು ಶೀಘ್ರದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಕ್ರಿಯಾ ಯೋಜನೆ ತಯಾರಿಸಿ ಕೂಡಲೇ ಕಾಮಗಾರಿ ಆರಂಭಿಸುವಂತೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.ಅಲ್ಲದೆ ನಿರ್ಮಿತಿ ಕೇಂದ್ರ ನಡೆಸುವ ಕಾಮಗಾರಿಯಲ್ಲಿ ಹೆಚ್ಚುವರಿ ಅನುದಾನ ಇದ್ದರೆ ಬಳಸಿ ತಡೆಗೋಡೆಯನ್ನು ನಿರ್ಮಾಣ ಮಾಡಿ ಇಲ್ಲದಿದ್ದರೆ ಇತರ ಯಾವುದಾದರೂ ಅನುದಾನವನ್ನು ಒದಗಿಸಲು ಜಿಲ್ಲಾಧಿಕಾರಿಗಳಲ್ಲಿ ಮಾತನಾಡುತ್ತೇನೆ ಎಂದು ಶಾಸಕರು ಭರವಸೆ ನೀಡಿದರೆಂದು ತಿಳಿದು ಬಂದಿದೆ.

. . . . .

ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಹಾಗೂ ಅಧಿಕಾರಿಗಳು,ಹಾಗೂ ಬಿಜೆಪಿ ಪಕ್ಷದ ಮುಖಂಡರುಗಳು ಉಪಸ್ಥಿತ ರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!