ಕಲ್ಲುಗುಂಡಿಯ ಸವೇರಪುರ ಆಂಗ್ಲಮಾಧ್ಯಮ ಶಾಲೆಯಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರಭಾರ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವನಿತಾ ಬಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. 9ನೇ ತರಗತಿ ವಿದ್ಯಾರ್ಥಿನಿ ತನ್ವಿ ಅವರು ಯೋಗಾಸನದ ಮಹತ್ವವನ್ನು ತಿಳಿಸಿದರು. ನಂತರ ವಿದ್ಯಾರ್ಥಿನಿಯರು ಯೋಗ ನೃತ್ಯ ರೂಪಕವನ್ನು ಪ್ರಸ್ತುತಪಡಿಸಿದರು. ಬಳಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಯೋಗಾಸನದ ವಿವಿಧ ಭಂಗಿಗಳನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. 9 ನೇ ತರಗತಿ ವಿದ್ಯಾರ್ಥಿನಿ ಆಯಿಷತ್ ಶಿಮ್ಲಾ ಸ್ವಾಗತಿಸಿ, 9ನೇ ತರಗತಿ ವಿದ್ಯಾರ್ಥಿನಿ ಏಂಜಲ್ ಜೆ ಅವರು ವಂದನಾರ್ಪಣೆಗೈದರು. 9ನೇ ತರಗತಿ ವಿದ್ಯಾರ್ಥಿನಿ ನಿಸರ್ಗರವರು ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಂಚಾಲಕರಾದ ಫಾದರ್ ಪಾವ್ಲ್ ಕ್ರಾಸ್ತಾ ರವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ಹಾಗೂ ಸಹಕಾರ ನೀಡಿದರು.