Ad Widget

ನಾಲ್ಕೂರು :- ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಗುತ್ತಿಗಾರು ವಲಯ, ಶೌರ್ಯ ವಿಪತ್ತು ನಿರ್ವಹಣಾ ತಂಡ ನಾಲ್ಕೂರು, ಶಾಲಾಭಿವೃದ್ಧಿ ಸಮಿತಿ ನಡುಗಲ್ಲು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರ ಅಧ್ಯಕ್ಷತೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು.

. . . . . . . . .

ಕಾರ್ಯಕ್ರಮವನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ಮತ್ತು ಗುತ್ತಿಗಾರು ವಲಯ ಭಜನಾ ಪರಿಷತ್ ನಿರ್ದೇಶಕರಾದ ಶ್ರೀ ವಿಜಯಕುಮಾರ್ ಚಾರ್ಮತರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.‌ ಪರಿಸರವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಮಕ್ಕಳಿಗೆ ಇದರ ಅರಿವು ಮೂಡಿಸುವ ಕೆಲಸ ನಾವು ಮಾಡಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ನಾಲ್ಕೂರು ಉಪ ವಲಯದ ಅರಣ್ಯ ಅಧಿಕಾರಿ ಸದಾಶಿವ ಸಿಂದಿಗಾರ್ ರವರು ಮಾತನಾಡುತ್ತ, ನಮ್ಮ ಪರಿಸರದ ಸುತ್ತಮುತ್ತ ಗಿಡಗಳನ್ನು ನೆಟ್ಟು ಅವುಗಳ ಪೋಷಣೆಯನ್ನು ಮಾಡುವಂತದು ಎಲ್ಲಾರ ಜವಾಬ್ದಾರಿಯಾಗಿದೆ. ಪರಿಸರ ರಕ್ಷಣೆ ಆಗಬೇಕಾದರೆ ಮತ್ತು ಮುಂದಿನ ಪೀಳಿಗೆಯು ಉಳಿಸಿ ಕೊಳ್ಳಬೇಕಾದರೆ ನಮ್ಮ ಮಕ್ಕಳಿಗೆ ಪರಿಸರದ ಬಗ್ಗೆ ತಿಳಿವಳಿಕೆಯನ್ನು ನೀಡಬೇಕು. ಪರಿಸರ ನಾಶದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕಿನ ಕೃಷಿ ಮೇಲ್ವಿಚಾರಕರಾದ ರಮೇಶ್ ರವರು ಮಾತನಾಡುತ್ತ, ಪರಿಸರ ನಾಶದಿಂದ ಭೂಮಿ ಮೇಲಿನ ಜೀವ ಜಂತುಗಳಿಗೆ ಉಸಿರಾಡಲು ಸರಿಯಾದ ಆಮ್ಲಜನಕ ಸಿಗುವುದಿಲ್ಲ, ಕಾಡುಗಳನ್ನು ನಾಶ ಮಾಡಿ ಕಾರ್ಖಾನೆಗಳನ್ನು ಮಾನವ ನಿರ್ಮಿಸಿರುವುದ್ದರಿಂದ ಕಾರ್ಖಾನೆಗಳಿಂದ ಕಲುಷಿತ ನೀರನ್ನು ನದಿಗಳಿಗೆ ಬಿಡುತ್ತಿರುವುದ್ದರಿಂದ ಜಲಮಾಲಿನ್ಯ ಉಂಟಾಗಿ ಜಲಚರ ಜೀವಿಗಳಿಗೆ ಮತ್ತು ಎಲ್ಲಾ ಜೀವ ಜಂತುಗಳಿಗೆ ಬದುಕಲು ಕಷ್ಟವಾಗಿದೆ. ಕಾಡುಗಳನ್ನು ನಾಶ ಮಾಡದೆ, ಅದನ್ನು ನಾವೆಲ್ಲಾ ರಕ್ಷಣೆಯನ್ನು ಮಾಡಿಕೊಂಡು ಹೋಗಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿರವರಾದ ಶ್ರೀಮತಿ ವನಜಾಕ್ಷಿರವರು ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಶಾಲಾ ಸುತ್ತಲಿನ ಪರಿಸರದಲ್ಲಿ ನಾಲ್ಕೂರು ಶೌರ್ಯ ವಿಪತ್ತು ತಂಡದ ಸದಸ್ಯರು ಹಾಗೂ ನಡುಗಲ್ಲು ಮತ್ತು ಹಾಲೇಮಜಲು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಗಿಡಗಳನ್ನು ನಾಟಿ ಮಾಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರರವರು, ನಾಲ್ಕೂರು ಅರಣ್ಯ ರಕ್ಷಕರಾದ ಅಶೋಕರವರು, ನಡುಗಲ್ಲು ಒಕ್ಕೂಟದ ಅಧ್ಯಕ್ಷರಾದ ಕೇಶರಾಜರವರು, ಹಾಲೇಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರುರವರು, ನಾಲ್ಕೂರು ಶೌರ್ಯ ವಿಪತ್ತು ಘಟಕದ ಪ್ರತಿನಿಧಿಯವರಾದ ಸತೀಶ್ ಬೊಂಬುಳ್ಳಿರವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡರವರು ಸ್ವಾಗತಿಸಿ, ಶಾಲಾ ಶಿಕ್ಷಕರಾದ ಕುಶಾಲಪ್ಪ ಗೌಡರವರು ಧನ್ಯವಾದವಿತ್ತರು. ಈ ಕಾರ್ಯಕ್ರಮವನ್ನು ನಾಲ್ಕೂರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯವರಾದ ಹರಿಶ್ಚಂದ್ರ ಕುಳ್ಳಂಪ್ಪಾಡಿರವರು ಕಾರ್ಯನಿರೂಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading