ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ, ಜನ ಜಾಗೃತಿ ವೇದಿಕೆ ಗುತ್ತಿಗಾರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನ ಕಾರ್ಯಕ್ರಮವನ್ನು ಕಾಲೇಜ್ ನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಈ ಕಾರ್ಯಕ್ರಮವನ್ನು ಗುತ್ತಿಗಾರು ವಲಯದ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಮಿತ್ರದೇವ ಮಡಪ್ಪಾಡಿಯವರು ದೀಪ ಬೆಳಗಿಸಿ ಉದ್ಘಾಟನೆಯನ್ನು ಮಾಡಿ, ಕಾಲೇಜ್ ನ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಮಾದಕ ವಸ್ತುಗಳಿಂದ ದೂರ ಇರುವ ಬಗ್ಗೆ ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ವಲಯ ಜನ ಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಪೀರನಮನೆಯವರು ಮಾತನಾಡುತ್ತ, ಮಾದಕ ವಸ್ತುಗಳಾದ ಗುಡ್ಕ, ಬೀಡಿ, ಸಿಗರೇಟ್, ಗಾಂಜಾ, ತಂಬಾಕುಗಳ ಸೇವನೆಯಿಂದ ಮನುಷ್ಯನ ಆರೋಗ್ಯ ಕೆಡುತ್ತದೆ. ಅದಲ್ಲದೆ ಆಯುಷ್ಯ ಕಡಿಮೆ ಆಗುತ್ತದೆ. ಇದರ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಇಲ್ಲದಿದ್ದರೆ ಮುಂದಿನ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಇದರ ಬಗ್ಗೆ ಜಾಗೃತಿಯನ್ನು ಮೂಡಿಸಿಕೊಂಡು, ಶಿಕ್ಷಣದ ಬಗ್ಗೆ ಹೆಚ್ಚಿನ ಒಲವನ್ನು ತೋರಿಸುವುದರಿಂದ ನಿಮ್ಮ ಶೈಕ್ಷಣಿಕ ಜೀವನವು ಉಜ್ವಲವಾಗುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಗುತ್ತಿಗಾರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯವರಾದ ಲೋಕೇಶ್ ಡಿ ಆರ್, ಕಾಲೇಜಿನ ಉಪನ್ಯಾಸಕರುಗಳು ಉಪಸ್ಥಿತರಿದ್ದರು.ಈ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ ರವರು ಸ್ವಾಗತಿಸಿ, ಕಾಲೇಜಿನ ಇಂಗ್ಲೀಷ್ ಉಪನ್ಯಾಸಕರಾದ ಕುಮಾರಿ ದಿವ್ಯಾರವರು ಧನ್ಯವಾದವಿತ್ತರು. ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಶ್ರೀಮತಿ ಪ್ರೀತಿ ರೈರವರು ಕಾರ್ಯನಿರೂಪಿಸಿದರು.