ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಐವರ್ನಾಡು ಪ್ರಾ.ಕೃ.ಪ.ಸ.ಸಂಘ,ಅರಣ್ಯ ಇಲಾಖೆ, ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ, ವನ ಮಹೋತ್ಸವ ಕಾರ್ಯಕ್ರಮ ಜೂ.30 ರಂದು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.
ತಾಲೂಕು ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಪ್ರಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಪಿ.ಕಾರ್ಯಪ್ಪರವರು ಗಿಡ ನೆಡುವ ಬಗ್ಗೆ ,ವನಮಹೋತ್ಸವ ನಡೆಸುವ, ಅರಣ್ಯ ಬೆಳೆಸುವ ಉದ್ದೇಶದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ವಹಿಸಿದ್ದರು. ವೇದಿಕೆಯಲ್ಲಿ ಐವರ್ನಾಡು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್ .ಮನ್ಮಥ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ವಲಯಾರಣ್ಯಾಧಿಕಾರಿ ಕಿರಣ್, ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಇಸಾಕ್, ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ ಉಪಸ್ಥಿತರಿದ್ದರು.ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್ ಸ್ವಾಗತಿಸಿ,ವಂದಿಸಿದರು.