Ad Widget

2022-23 ನೇ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಶೇ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ 2022-23ನೇ ಸಾಲಿನಲ್ಲಿ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ 8 ಜುಲೈ 2023 ನೇ ಶನಿವಾರದಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯಲಿದೆ. *ಕನ್ನಡ ಸಾಹಿತ್ಯ -ಭಾಷೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕಳೆದ 8 ವರ್ಷಗಳಿಂದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.ಹತ್ತನೇ ತರಗತಿಯಲ್ಲಿ ಕನ್ನಡ ವಿಷಯದಲ್ಲಿ ಪೂರ್ಣ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಆ ವಿದ್ಯಾರ್ಥಿಗಳನ್ನು ಕನ್ನಡ ಸಾಹಿತ್ಯದೆಡೆಗೆ ಸೆಳೆಯುವುದು ,ಕನ್ನಡ ಪುಸ್ತಕಗಳನ್ನು ಓದಲು ಪ್ರೇರೇಪಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶ. *8 ಜುಲೈ 2023ನೇ ಶನಿವಾರದಂದು ಸುಳ್ಯದ ಕನ್ನಡ ಭವನದಲ್ಲಿ ನಡೆಯುವ ಗೌರವಾರ್ಪಣೆ ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಭಾಗೀರಥಿ ಮುರುಳ್ಯರವರು ಉದ್ಘಾಟಿಸಲಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷರಾದ ಡಾ.ಕೆ.ವಿ.ಚಿದಾನಂದರವರು ಗೌರವಿಸಲಿದ್ದಾರೆ. ಸುಳ್ಯ ವೃತ್ತ ಪೊಲೀಸ್ ಉಪ ನಿರೀಕ್ಷಕ ಶ್ರೀ ಈರಯ್ಯ ಡಿ‌.ಎಸ್ ಅಭಿನಂದನಾ ಮಾತುಗಳನ್ನಾಡಲಿದ್ದಾರೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಗೌಡ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಸುಳ್ಯ ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಪೇರಾಲು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವ್ಯಾಪ್ತಿಯ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳ ಸುಮಾರು 90ಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಸಾಧನೆಗಾಗಿ ಗೌರವ ಸ್ವೀಕರಿಸಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading