Ad Widget

ಸುಬ್ರಹ್ಮಣ್ಯ : ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

  ಮನಸ್ಸನ್ನು ಅರಳಿಸುವ ಭಾರತೀಯ ಕಲಾ ಪ್ರಕಾರಗಳು ಎಂದೆAದಿಗೂ ವಿದ್ಯಾರ್ಥಿಗಳಿಗೆ ಸಂತಸ ನೀಡುವುದರೊಂದಿಗೆ ಪಠ್ಯ ವಿಚಾರದಲ್ಲಿ ಹುಮ್ಮಸ್ಸಿನಿಂದ ತೊಡಗಿಕೊಳ್ಳಲು ಸ್ಪೂರ್ತಿ ನೀಡುತ್ತದೆ. ಪ್ರಫುಲ್ಲಿತ ಮನಸುಗಳ ನಿರ್ಮಾಣಕ್ಕೆ ಕಲಾಸಂಪತ್ತು ಅಭೂತಪೂರ್ವ ಕೊಡುಗೆ ನೀಡಿದೆ. ಎಳವೆಯಲ್ಲಿ ಮಕ್ಕಳಲ್ಲಿ ಅಡಕವಾಗಿರುವ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಪ್ರದರ್ಶನಗಳು ಅಡಿಗಲ್ಲಾಗಿವೆ.  ವಿದ್ಯಾರ್ಥಿಗಳು ತಮ್ಮ ಕಲಾಸಂಪತ್ತಿನ ಶ್ರೇಷ್ಠತೆಗೆ ತಮ್ಮದೆ ಆದ ಕೊಡುಗೆ ನೀಡಬೇಕು ಎನ್ನುವ ಉದ್ದೇಶದಿಂದÀ ಪ್ರತಿಭಾ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಎಸ್‌ಎಸ್‌ಪಿಯು ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ ಹೇಳಿದರು.
   ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು.ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಶನಿವಾರ ನಡೆದ ಕಾಲೇಜಿನ ಸಾಂಸ್ಕೃತಿಕ ಸಂಘ ಮತ್ತು  ಪ್ರತಿಭಾ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸಲು ಈ ಮೂಲಕ ವೇದಿಕೆ ಕಲ್ಪಿಸಲಾಗಿದೆ.ಮಕ್ಕಳಲ್ಲಿನ ವಿಶೇಷ ಪ್ರತಿಭೆಗಳನ್ನು ಗುರುತಿಸಿ ಅವುಗಳನ್ನು ಪೋಷಿಸುವ ಉದ್ದೇಶದಿಂದ ಕಲಾ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.

. . . . . . . . .


ಕಾರ್ಯಕ್ರಮಗಳಿಗೆ ಸಾಂಸ್ಕೃತಿಕ ತಂಡ:
   ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಾ ಬರುತ್ತಿದೆ.ಅದರೊಂದಿಗೆ ಸಂಸ್ಥೆಯ ವಿದ್ಯಾರ್ಥಿಗಳ ಪ್ರತಿಭೆಯು ಸರ್ವರಿಗೂ ತಿಳಿಸುವ ಉದ್ದೇಶದಿಂದ ಸಾಂಸ್ಕೃತಿಕ ತಂಡ ರಚಿಸಲಾಗುತ್ತದೆ.ತಂಡವನ್ನು ಸಂಘದ ಸಂಚಾಲಕರ ನೇತೃತ್ವದಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲು ಸಜ್ಜುಗೊಳಿಸಲಾಗುವುದು. ಕುಕ್ಕೆ ಸೇರಿದಂತೆ ವಿವಿಧ ಊರುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕಾಲೇಜಿನ ತಂಡವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಈ ಮೂಲಕ ನಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಪ್ರತಿಭೆ ಸರ್ವರಿಗೂ ತಿಳಿಯುವಂತೆ ಯೋಚನೆ ಮಾಡಲಾಗಿದೆ ಎಂದು ಪ್ರಾಚಾರ್ಯ ಸೋಮಶೇಖರ ನಾಯಕ್ ಹೇಳಿದರು.
ಪಂಚ ವಾದ್ಯಗಳ ಕಲರವ:
   ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ ದೀಪ ಪ್ರಜ್ವಲನದ ಮೂಲಕ ಸಾಂಸ್ಕೃತಿಕ ಸಂಘವನ್ನು ಉದ್ಘಾಟಿಸಿದರು. ಈ ವೇಳೆ ಕೇರಳ ಚೆಂಡೆಯ ಪ್ರಾವಿಣ್ಯತೆ ಹೊಂದಿದ ವಿದ್ಯಾರ್ಥಿಗಳು ಸಿಂಗಾರಿ ಮೇಳ ನೆರವೇರಿಸಿದರು. ಬಳಿಕ ಪ್ರಾಚಾರ್ಯರು ಚೆಂಡೆ ವಾದನದ ಮೂಲಕ ಪ್ರತಿಭಾ ಪ್ರದರ್ಶನಕ್ಕೆ ಚಾಲನೆ ನೀಡಿದರು.ಬಳಿಕ ವೇದಿಕೆಯಲ್ಲಿದ್ದ ಗಣ್ಯರು ಚೆಂಡೆ, ಡೋಲು, ತಾಸೆ, ತಾಸೆಡೋಲು, ಯಕ್ಷಗಾನ  ಚೆಂಡೆಯನ್ನೊಳಗೊAಡ ಪಂಚ ವಾದ್ಯವನ್ನು ನುಡಿಸಿದರು.
     ತೀರ್ಪುಗಾರರಾದ ಗ್ರಾ.ಪಂ.ಸದಸ್ಯೆ ಭಾರತಿ ದಿನೇಶ್, ಇನ್ನರ್‌ವ್ಹೀಲ್ ಅಧ್ಯಕ್ಷೆ ಸರೋಜಾ ಮಾಯಿಲಪ್ಪ, ಉಪನ್ಯಾಸಕಿ ಮತ್ತು ಭಾಗವತೆ ಭವ್ಯಶ್ರೀ ಹರೀಶ್ ಕುಲ್ಕುಂದ ಮುಖ್ಯಅತಿಥಿಗಳಾಗಿದ್ದರು. ಸಾಂಸ್ಕೃತಿಕ ತಂಡದ ಸಂಚಾಲಕಿ ರೇಖಾರಾಣಿ ಸೋಮಶೇಖರ್, ವಿದ್ಯಾರ್ಥಿ ಸರಕಾರದ ಸಂಚಾಲಕ ಜಯಪ್ರಕಾಶ್.ಆರ್, ಸಾಂಸ್ಕೃತಿಕ ಸಂಘದ ಕಾರ್ಯದರ್ಶಿ ವಿದ್ಯಾಲಕ್ಷಿö್ಮ ವೇದಿಕೆಯಲ್ಲಿದ್ದರು.
   ಸಾಂಸ್ಕೃತಿಕ ಸಂಘದ ಸಹಸಂಚಾಲಕ ರತ್ನಾಕರ ಸುಬ್ರಹ್ಮಣ್ಯ ಸ್ವಾಗತಿಸಿದರು. ಉಪನ್ಯಾಸಕ ಶ್ರೀಧರ್ ಪುತ್ರನ್ ವಂದಿಸಿದರು.ಉಪನ್ಯಾಸಕಿ ಶೃತಿ ಯಾಲದಾಳು ಕಾರ್ಯಕ್ರಮ ನಿರೂಪಿಸಿದರು.ಸಾಂಸ್ಕೃತಿಕ ಸಂಘದ ಮಹೇಶ್.ಎಚ್ ಸಹಕರಿಸಿದರು.ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿಗಳ ಪ್ರತಿ ತರಗತಿಯ ನಡುವೆ ನಡೆದ ಪ್ರತಿಭಾ ಸ್ಪರ್ಧೆಯಲ್ಲಿ ಕಾಲೇಜಿನ ಸುಮಾರು ೧೦ ತಂಡಗಳು ಪ್ರತಿಭೆಯನ್ನು ತೋರ್ಪಡಿಸಿದವು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading