ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಸುಳ್ಯ ತಾಲೂಕು ಕಚೇರಿಗೆ ಇಂದು ಭೇಟಿ ನೀಡಿ ಅಧಿಕಾರಿಗಳ ಜೊತೆ ಪ್ರಾಕೃತಿಕ ವಿಕೋಪಗಳ ಕುರಿತು ಸಭೆ ನಡೆಸಿದರು.
ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸುಳ್ಯ ತಾಲೂಕಿಗೆ ಆಗಮಿಸಿದ್ದು, ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.
ಇವರ ಜತೆಗೆ ಪ್ರೊಬೇಷನರಿ ಡಿಸಿ ಮುಕುಲ್ ಜೈನ್ , ಪುತ್ತೂರು ಸಹಾಯಕ ಕಮೀಷನರ್ ಮಹೇಶ್ಚಂದ್ರ, ತಹಶೀಲ್ದಾರ್ ಮಂಜುನಾಥ್ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.