Ad Widget

ಪ್ರವೀಣ್ ನೆಟ್ಟಾರ್ ಹಂತಕರಿಗೆ ಸುಳ್ಯದ ನಗರದಲ್ಲಿ 2ನೇ ಭಾರಿ ಎಚ್ಚರಿಕೆ ಕೊಟ್ಟ NIA…!

ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎನ್ನುವ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಮತ್ತೊಮ್ಮೆ ಎನ್‌ಐಎ (NIA) ಹೊರಡಿಸಿದೆ. ಇದು ತಲೆಮರೆಸಿಕೊಂಡಿರುವ ಹಂತಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದೆ.ಈ ಎಚ್ಚರಿಕೆಗೂ ಬಗ್ಗದಿದ್ದರೆ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಆ ಎಚ್ಚರಿಕೆಯ ಸಂದೇಶದಲ್ಲೂ ಶರಣಾಗದೆ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ ಅನ್ನುವ ಮಾಹಿತಿ ಸಿಕ್ಕಿದೆ. ಆಗಸ್ಟ್ 18ರೊಳಗೆ ಶರಣಾಗಲೇಬೇಕು ಎಂದು ಸೂಚಿಸಿದೆ. ಈ ಹಿಂದೆ ಜೂ.30ರೊಳಗೆ ಶರಣಾಗಬೇಕು. ಇಲ್ಲದೇ ಹೋದಲ್ಲಿ ಅವರ ಮನೆಯನ್ನು ಜಪ್ತಿ ಮಾಡುವುದಾಗಿ ಎನ್ಎಐಎ(NIA) ಅಧಿಕಾರಿಗಳು ಧ್ವನಿ ವರ್ಧಕದ ಮೂಲಕ ತಿಳಿಸಿದ್ದರು. ಆದರೆ ಇದುವರೆಗೆ ಪ್ರವೀಣ್ ನೆಟ್ಟಾರು ಹಂತಕರು ಶರಣಾಗಿರಲಿಲ್ಲ. ಇದಕ್ಕೆ ಸಂಬಂಧಿಸಿದಂತೆ ಎರಡು ವಾರಗಳ ಹಿಂದೆ ಎನ್‌ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿವರ್ಧಕದ ಮೂಲಕ ಅನೌನ್ಸ್ ಮಾಡುತ್ತಿದ್ದು, ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!