Ad Widget

ಕರ್ನಾಟಕದಲ್ಲಿ ಹಿಂದೂಗಳ ಹತ್ಯೆಗೆ ಖಂಡನೆ – ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸಲು ಹಿಂದೂ ಜನಜಾಗೃತಿ ಸಮಿತಿ ಮನವಿ

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ, ಜೈನ ಮುನಿ ಆಚಾರ‍್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್ ನ ವೇಣುಗೋಪಾಲ ಇವರ ಹತ್ಯೆ ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ. ಅಷ್ಟೇ ಅಲ್ಲದೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಪ್ರತಿ ರವಿವಾರ ನಡೆಯುತ್ತಿದ್ದ ನಾಗರಕಟ್ಟೆಯ ಪೂಜೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬಕ್ರೀದ್ ಸಮಯದಲ್ಲಿ ಬಾದಾಮಿ, ಶಿಕಾರಿಪುರ, ಶಿರಸಿ ಸೇರಿದಂತೆ ಹಲವೆಡೆ ಅಕ್ರಮವಾಗಿ ಗೋಹತ್ಯೆ ಮಾಡಿ, ಗೋವಿನ ಎಲಬುಗಳನ್ನು ದೇವಸ್ಥಾನ, ಹಿಂದೂ ಮನೆಗಳ ಎದುರು ಎಸೆದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ. ಹಾಗಾಗಿ ಹಿಂದೂ ಕಾರ್ಯಕರ್ತರಿಗೆ ಹಿಂದೂ ಧರ್ಮಕ್ಕೆ ಹೋರಾಟ ಮಾಡುವವರಿಗೆ ರಕ್ಷಣೆ ನೀಡಬೇಕು, ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಜು. 17 ರಂದು ಸುಳ್ಯದ ಮಿನಿ ವಿಧಾನ ಸೌಧದಲ್ಲಿ ತಹಶಿಲ್ದಾರ್ ಮಂಜುನಾಥ ಎಂ. ಅವರ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಾಭಿಮಾನಿಗಳಾದ ಮೀನಾಕ್ಷಿ. ಕೆ. ಆರ್. ನಿವೃತ್ತ ಮುಖ್ಯ ಶಿಕ್ಷಕರು, ಬಾಲಕೃಷ್ಣ ನಾಯಕ್ ನಿವೃತ್ತ ಬ್ಯಾಂಕ್ ಉದ್ಯೋಗಿ , ಅನಂತ ಕೃಷ್ಣ ಮತ್ತು ಹಿಂದೂ ಜನಜಾಗೃತಿ ಸಮಿತಿಯ ನಂದಕುಮಾರ, ಶೇಷಪ್ಪ, ಧನಂಜಯ ಮತ್ತು ರಾಧಾಕೃಷ್ಣ ಉಪಸ್ಥಿತರಿದ್ದರು.*ವಕ್ಫ್ ಬೋರ್ಡ್ ವಶಪಡಿಸಿಕೊಂಡ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂತಿರುಗಿಸಿ* ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ತನ್ನ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಸರಕಾರಿ ಮತ್ತು ಖಾಸಗಿ ಜಮೀನುಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ. ಆ ಮೂಲಕ ದೇಶದಲ್ಲಿ ೮ ಲಕ್ಷ ಎಕರೆ ಜಮೀನನ್ನು ಕಬಳಿಸಿದೆ. ಇದೊಂದು ದೊಡ್ಡ ‘ಲ್ಯಾಂಡ್ ಜಿಹಾದ್’ ಆಗಿದೆ. ಹಾಗಾಗಿ ಈ ಕಾನೂನನ್ನು ರದ್ದುಗೊಳಿಸಿ ಜಮೀನಿನ ನಿಜವಾದ ಮಾಲೀಕರಿಗೆ ಅದರ ಅಧಿಕಾರವನ್ನು ನೀಡಬೇಕು. ದೇಶದಲ್ಲಿ ’ಸಮಾನ ನಾಗರಿಕ ಕಾನೂನು’ ಜಾರಿಗೆ ತರುವ ಮೂಲಕ ಅಲ್ಪಸಂಖ್ಯಾತರ ಹೆಸರಿನಲ್ಲಿ ಜಾರಿಯಲ್ಲಿರುವ ಎಲ್ಲಾ ವಿಶೇಷ ಸೌಲಭ್ಯಗಳು, ಕಾನೂನುಗಳು, ಆಯೋಗಗಳು, ಮಂಡಳಿಗಳು, ಸರಕಾರಿ ಇಲಾಖೆಗಳನ್ನು ರದ್ದುಪಡಿಸಬೇಕು ಮತ್ತು ಎಲ್ಲರಿಗೂ ಸಮಾನ ನಡವಳಿಕೆ ಸಿಗುವಂತಾಗಬೇಕು. ಈ ಬೇಡಿಕೆಗಳನ್ನು ಅಂಗೀಕರಿಸದಿದ್ದರೆ ‘ವಕ್ಫ್ ಕಾನೂನು’ ವಿರುದ್ಧ ಪ್ರಬಲ ಚಳವಳಿ ನಡೆಸಬೇಕಾಗುತ್ತದೆ ಎಂದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!