ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರದಲ್ಲಿ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಇಂದು ನಡೆಯಿತು.
ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ ಅವರು ಉದ್ಘಾಟಿಸಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲೆಯು 4 ವರ್ಷಗಳ ಹಿಂದೆ ಮೇಲ್ದರ್ಜೆಗೇರಿದ್ದು, ಸರಕಾರದಿಂದ ಸುಮಾರು 19 ಕೋಟಿ ಅನುದಾನವಿದ್ದು, ಸರಕಾರದೊಂದಿಗೆ,ನಿರಂತರ ಸಂಪರ್ಕ ಸಾದಿಸಿ ಅತೀ ಶೀಘ್ರದಲ್ಲಿ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಪಡುವುದಾಗಿ ಶರೀಫ್ ಕಂಠಿಯವರು ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಚಿದಾನಂದ ಕಾಯರ್ತೋಡಿ ಮಾತನಾಡಿ ಎಲ್ಲರು ಜೊತೆಯಾಗಿ ಪಕ್ಷತೀತವಾಗಿ, ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸೋಣ ಎಂದು ತಿಳಿಸಿದರು.ಸಭೆಯಲ್ಲಿ, ಶಾಲಾ ಪ್ರಾoಶುಪಾಲರು, ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು