ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ ಜು.22ರಂದು ನಡೆಯಿತು. ಕಾರ್ಯಕ್ರಮ ಶಾಲಾ ಆಡಳಿತ ಮಂಡಳಿ ಸಹಕಾರದಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜುಕೇಷನ್ ಸೊಸೈಟಿ ಬಾಳಿಲ ಇದರ ಕೋಶಾಧಿಕಾರಿಯಾದ ರಾಧಾಕೃಷ್ಣ ರಾವ್ ಉಡುವೆಕೋಡಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬಾಬು ಅಜಿಲ ಆಟಿ ತಿಂಗಳ ವೈಶಿಷ್ಟ್ಯತೆಯ ಬಗ್ಗೆ ಮಾಹಿತಿ ನೀಡಿದರು. ಅತಿಥಿಗಳಾಗಿ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ರುಕ್ಮಯ್ಯ ನಾಯ್ಕ, ಶಾಲಾ ಮುಖ್ಯಗುರು ಕೃಷ್ಣಮೂರ್ತಿ ಭಾಗವಹಿಸಿದ್ದರು. ಶಾಲಾ ಶಿಕ್ಷಕಿ ಶುಭಾ ಡಿ. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಶಿವಪ್ರಸಾದ್ ಕಾರ್ಯಕ್ರಮ ಸಂಯೋಜಿಸಿದರು. ಶಿಕ್ಷಕರಾದ ಯಶೋಧಾ.ಎನ್.ಕೆ, ರಮ್ಯಾ, ವನಿತಾ ಸಹಕರಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಸದಸ್ಯರು, ಪೋಷಕ ವೃಂದ, ಅಂಗನವಾಡಿ ಪುಟಾಣಿಗಳು, ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಚೆನ್ನೆಮಣೆ ಆಟ, ನೇಜಿ ನಾಟಿ, ಪಾಡ್ದನ, ಆಟಿ ಕಳೆಂಜ ವಿಶೇಷವಾಗಿತ್ತು.
ಈ ಎಲ್ಲ ಕಾರ್ಯಕ್ರಮಗಳಿಗೆ ಶಾಲಾ ಆಡಳಿತ ಮಂಡಳಿ ಮತ್ತು ಎಸ್ಡಿಎಂಸಿ ಯವರು ಸಂಪೂರ್ಣ ಸಹಕಾರ ನೀಡಿದರು.