ಬಿಡುವು ನೀಡದ ಮಳೆ, ದಕ್ಷಿಣ ಕನ್ನಡ ಶಾಲೆಗಳಿಗೆ ನಾಳೆಯೂ ರಜೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಎಡಬಿಡದೇ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ , ಸರ್ಕಾರಿ , ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆಯೂ (ಜು. 27)ರಂದು ರಜೆ ಘೋಷಣೆ ಮಾಡಲಾಗಿದೆ. ಆದರೆ ಪದವಿ ಪೂರ್ವ, ಡಿಪ್ಲೋಮಾ, ಪದವಿ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಮಕ್ಕಳು ತಗ್ಗು ಪ್ರದೇಶಗಳಿಗೆ ತೆರಳದಂತೆ ಪೋಷಕರು ಎಚ್ಚರ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಮೀನುಗಾರರಿಗೆ ಮೀನುಗಾರಿಕೆಗೆ ತೆರಳಲು ನಿರ್ಬಂಧ ಹೇರಲಾಗಿದೆ. ಎಲ್ಲಾ ತಾಲೂಕು ಆಡಳಿತ ಹಾಗೂ ಜಿಲ್ಲಾ ಅಧಿಕಾರಿಗಳು ಕೇಂದ್ರದಲ್ಲಿಯೇ ಇರುವಂತೆ ಸೂಚನೆ ನೀಡಲಾಗಿದೆ.