ಬಿಜೆಪಿ ಸುಳ್ಯ ಮಂಡಲ ಸಮಿತಿಯ ವತಿಯಿಂದ ಕಳೆದ ವರ್ಷ ಜುಲೈ 26ರಂದು ಹತ್ಯೆಗೀಡಾದ ಬಿಜೆಪಿಯ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಸ್ಮೃತಿದಿನವನ್ನು ಆಚರಿಸಲಾಗುತಿದೆ. ಇದರ ಅಂಗವಾಗಿ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿ ಮುಖಂಡರು ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬೂಡಿಯಾರ್ ರಾಧಾಕೃಷ್ಣ ರೈ, ಸುಬೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ಶ್ರೀನಾಥ್ ಬಾಳಿಲ, ಮಹೇಶ್ ಕುಮಾರ್ ಮೇನಾಲ, ಸುನಿಲ್ ಕೇರ್ಪಳ, ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಪನ್ನೆ, ವಸಂತ ನಡುಬೈಲು ಮತ್ತಿತರರು ಇದ್ದರು
ಬಳಿಕ ಪೆರುವಾಜೆ ಜೆ.ಡಿ.ಆಡಿಟೋರಿಯಂನಲ್ಲಿ ನಡೆದ ರಕ್ತದಾನ ಶಿಬಿರ ಹಾಗೂ ಸ್ಮೃತಿದಿನವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ,ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಗುರುದತ್ ನಾಯಕ್,ಯುವ ಮೋರ್ಚಾ ಸುಳ್ಯ ಮಂಡಲ ಅಧ್ಯಕ್ಷ ಕೃಷ್ಣ ಎಂ.ಆರ್., ವಸಂತ ನಡುಬೈಲು,ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ್ ಪೂಜಾರಿ,ತಾಯಿ ರತ್ನಾವತಿ,ಪತ್ನಿ ನೂತನಾಕುಮಾರಿ ಉಪಸ್ಥಿತರಿದ್ದರು.
ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ವಂದಿಸಿದರು. ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ನಿರೂಪಿಸಿದರು. ಪ್ರಮುಖರಾದ ಶ್ರೀನಾಥ್ ರೈ ಬಾಳಿಲ, ಮಹೇಶ್ ಕುಮಾರ್ ರೈ ಮೇನಾಲ, ಸುನಿಲ್ ಕೇರ್ಪಳ, ಮನುದೇವ್ ಪರಮಲೆ ಮತ್ತಿತರರು ಉಪಸ್ಥಿತರಿದ್ದರು.